ಗೋಕಾಕ:ಕೊರೋನಾ ಹಿನ್ನೆಲೆ: ಖಾಸಗಿ ವೈದ್ಯರು ಸಾರ್ವಜನಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ಸೇವೆ ಒದಗಿಸುವಂತೆ ಕರವೇ ಆಗ್ರಹ
ಕೊರೋನಾ ಹಿನ್ನೆಲೆ: ಖಾಸಗಿ ವೈದ್ಯರು ಸಾರ್ವಜನಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ಸೇವೆ ಒದಗಿಸುವಂತೆ ಕರವೇ ಆಗ್ರಹ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 4 :
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಸಾರ್ವಜನಿಕರಿಗೆ ಕಡ್ಡಾಯವಾಗಿ ವೈದ್ಯಕೀಯ ಸೇವೆ ಒದಗಿಸುವಂತೆ ಆದೇಶಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಮನವಿ ಅರ್ಪಿಸಿದರು
ಶನಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಅವರ ಮುಖಾಂತರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಪ್ರತ್ಯೇಕ ಮನವಿ ಅರ್ಪಿಸಿದರು
ಕಳೆದ 2 ವಾರಗಳಿಂದ ಕೊರೋನಾ ವೈರಸ್ ತಡೆಗಟ್ಟಲು ಸರಕಾರ ರಾಜಾದ್ಯಂತ ಲಾಕಡೌನ ಘೋಷಣೆ ಮಾಡಿದೆ ಈ ತುರ್ತು ಪರಿಸ್ಥಿತಿಯಲ್ಲಿ ಸರಕಾರ ಸಾರ್ವಜನಿಕರಿಗೆ ಯಾವದೇ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಂಡಿದೆ . ಆದರೆ ತುರ್ತು ಸಂದರ್ಭದಲ್ಲಿ ಕೆಲವರು ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಇವರನ್ನು ತಪಾಸಣೆ ಮಾಡಬೇಕಾದ ಖಾಸಗಿ ವೈದ್ಯರು ತಮ್ಮ ದವಾಖಾನೆಗಳನ್ನು ಸಂಪೂರ್ಣ ಬಂದ ಮಾಡಿ ಯಾರನ್ನು ಸಹ ತಪಾಸಣೆಗೆ ಒಳಪಡಿಸುತ್ತಿಲ್ಲ ಇದರಿಂದ ಸಾರ್ವಜನಿಕರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಗರದಲ್ಲಿ ಇರುವ ಎಂ.ಬಿ.ಬಿ.ಎಸ್, ಎಂ.ಡಿ, ಆಯುಷ್ಯ ವೈದ್ಯರಿಗೆ ಕಟ್ಟು ನಿಟ್ಟಿನ ಆದೇಶವನ್ನು ನೀಡಿ ತುರ್ತ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ಮಾಡಿಸಲು ಬಂದವರಿಗೆ ಸೂಕ್ತ ಚಿಕಿತ್ಸೆ ಮಾಡಿ ಅಗತ್ಯ ಸಲಹೆಗಳನ್ನು ನೀಡುವಂತೆ ಆದೇಶಿಸಬೇಕು ಇದನ್ನು ಯಾರೇ ವೈದ್ಯರು ಉಲ್ಲಂಘಿಸಿದರೆ ಅವರ ಪರವಾಣಿಗೆಯನ್ನು ರದ್ದು ಪಡಿಸಬೇಕೆಂದು ಕರವೇ ಅಧ್ಯಕ್ಷ ಖಾನಪ್ಪನವರ ಮನವಿಯಲ್ಲಿ ವಿನಂತಿಸಿದ್ದಾರೆ
ಈ ಸಂದರ್ಭದಲ್ಲಿ ಕೃಷ್ಣಾ ಖಾನಪ್ಪನವರ , ಮುಗುಟು ಪೈಲವಾನ ಉಪಸ್ಥಿತರಿದ್ದರು