RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ದೀಪ ಬೆಳಗಿಸೋಣ, ಕೊರೋನಾ ಓಡಿಸೋಣ: ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ದೀಪ ಬೆಳಗಿಸೋಣ, ಕೊರೋನಾ ಓಡಿಸೋಣ: ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 

ದೀಪ ಬೆಳಗಿಸೋಣ, ಕೊರೋನಾ ಓಡಿಸೋಣ: ಕೆಎಮ್‍ಎಫ್ ಅಧ್ಯಕ್ಷ  ಬಾಲಚಂದ್ರ ಜಾರಕಿಹೊಳಿ
ನಾಳಿನ ಭಾನುವಾರದ ರಾತ್ರಿ 9ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ.
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 4 :

 
ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕೊರೊನಾ ಕತ್ತಲಿನಿಂದ ಬೆಳಕಿನೆಡೆಗೆ ಹೆಜ್ಜೆ ಇಡುವಂತೆ ಪ್ರಧಾನಿಗಳು ಸಂಕಲ್ಪ ಮಾಡಿದ್ದಾರೆ. ಅವರು ಆಶಯದಂತೆ ನಾವೆಲ್ಲರೂ ಮನೆ-ಕ್ವಾರಂಟನೆಗಳಲ್ಲಿ ಏಕಾಂತನದ ಅನುಭವಿಸುತ್ತಿರುವ ಮನಗಳಿಗೆ ಭರವಸೆಯ ಆಶಾಕಿರಣ ಮೂಡಿಸಿ ಕೊರೊನಾ ಮಣಿಸಲು ಸಾಮೂಹಿಕ ದೃಢ ಸಂಕಲ್ಪ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಭಾನುವಾರ ರಾತ್ರಿ 9 ಗಂಟೆಗೆ ಮೊಂಬತ್ತಿಯಾಗಲಿ, ದೀಪವಾಗಲಿ ಅಥವಾ ಟಾರ್ಚ್‍ವಾಗಲಿ ಒಂಬತ್ತು ನಿಮಿಷಗಳ ಕಾಲ ಬೆಳಗಬೇಕು. ಮನೆಯೊಳಗೆ ಇದ್ದುಕೊಂಡು ಸಾಮಾಜಿಕ ಅಂತರ ಪಾಲಿಸಬೇಕು. ಯಾವುದೇ ಕಾರಣಕ್ಕೂ ಗುಂಪುಗೂಡಬಾರದು ಎಂದು ಅವರು ವಿನಂತಿಸಿಕೊಂಡಿದ್ದಾರೆ.
ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸಿ..:- ಎಪ್ರೀಲ್-14ರ ತನಕ ದೇಶದಾದ್ಯಂತ ಲಾಕ್‍ಡೌನ್ ಜಾರಿಯಲ್ಲಿದ್ದು, ಯಾರು ಮನೆಯಿಂದ ಆಚೆ ಬರಬಾರದು. ಪ್ರತಿಯೊಬ್ಬರು ಮನೆಯಲ್ಲಿಯೇ ಇರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶ ಪಾಲಿಸಬೇಕಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ ನಿಜಾಮುದ್ದೀನ್ ಮಸೀದ್‍ನಲ್ಲಿ ನಡೆದ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿರುವ ಜಿಲ್ಲೆಯ ಮೂವರಲ್ಲಿಯೂ ಕೋವಿಡ್-19 ಸೊಂಕು ಕಾಣಿಸಿಕೊಂಡಿದ್ದರಿಂದ ಜನರು ಇನ್ನೂ ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಾವಿ ಜಿಲ್ಲೆಯೂ ಸೇರಿದಂತೆ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೇ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Related posts: