ಘಟಪ್ರಭಾ:ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ
ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ
ನಮ್ಮ ಬೆಳಗಾವಿ ಇ – ವಾರ್ತೆ ,ಘಟಪ್ರಭಾ ಮೆ 2 :
ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು.
ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.
1992 ರಿಂದ ಅರಭಾವಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಎಲ್ಲ ವರ್ಗಗಳ ಹಿತರಕ್ಷಣೆಗೆ ದುಡಿಯುತ್ತಿದ್ದಾರೆ. ಎಲ್ಲ ಸಮಾಜಗಳನ್ನು ಒಂದುಗೂಡಿಸುವ ಮೂಲಕ ಬಸವಣ್ಣನವರ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡುತ್ತಿದ್ದಾರೆ. ಕೊರೋನಾದಂತಹ ಮಹಾಮಾರಿಯಿಂದಾಗಿ ಲಾಕ್‍ಡೌನ್‍ಗೆ ಒಳಗಾಗಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಅಗತ್ಯವಿರುವ ದಿನಬಳಕೆಯ ದಿನಸಿ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಮೊದಲಿನಿಂದಲೂ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸ್ಪಂದಿಸುವ ಕೆಲಸವನ್ನು ಮೈಗೂಡಿಸಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತವರ ಸಹೋದರರ ಕಾರ್ಯ ಪ್ರಶಂಸನೀಯವಾಗಿದೆ ಎಂದು ಹೇಳಿದರು.
ಅರಭಾವಿ ಕ್ಷೇತ್ರದಲ್ಲಿ ಪ್ರತಿ ಕುಟುಂಬಕ್ಕೆ ಆಹಾರ ಧಾನ್ಯಗಳನ್ನು ವಿತರಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸ್ವತಃ ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ವರ್ಗ, ಪ್ರಭಾನಗರ ಹಾಗೂ ಪ್ರಭಾಶುಗರ ಕಾಲನಿಯ ನಿವಾಸಿಗಳಿಗೆ ಕಿಟ್‍ಗಳನ್ನು ನೀಡಿದ್ದಾರೆ. ಅವರಿಗೆ ನಮ್ಮ ಕಾರ್ಖಾನೆಯ ಸಿಬ್ಬಂದಿ ಹಾಗೂ ನಿವಾಸಿಗಳ ಪರವಾಗಿ ಕೃತಜ್ಞತೆ ಅರ್ಪಿಸುವುದಾಗಿ ಪಾಟೀಲ ಹೇಳಿದರು.
ಪ್ರಭಾಶುಗರ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ದಿಗ್ದರ್ಶಕ ಮಂಡಳಿ ಸದಸ್ಯರಾದ ಬಸಗೌಡ ಪಾಟೀಲ, ಕೆಂಚಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಭೂತಪ್ಪ ಗೊಡೇರ, ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಶಿದ್ಲಿಂಗ ಕಂಬಳಿ, ಲಕ್ಕವ್ವ ಬೆಳಗಲಿ, ವರ್ತಕ ವಿಕ್ರಮ ಅಂಗಡಿ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಲೆಕ್ಕಪರಿಶೋಧಕ ಸೈದಪ್ಪ ಗದಾಡಿ, ಟೀಂ ಎನ್‍ಎಸ್‍ಎಫ್‍ನ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಸಿ.ಪಿ. ಯಕ್ಷಂಬಿ, ಓಎಸ್ ಐ.ಎ. ಜಂಬಗಿ, ಪರಸಪ್ಪ ಸಾರಾಪೂರ, ಮುಂತಾದವರು ಉಪಸ್ಥಿತರಿದ್ದರು.
ಸಿಡಿಓ ಜೆ.ಆರ್. ಬಬಲೇಶ್ವರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸಲಾಯಿತು.