ಗೋಕಾಕ:ಮಹಾತ್ಮಗಾಂಧಿ ನರೇಗಾ ಯೋಜನೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಸೌಲಭ್ಯ ಕಲ್ಪಿಸಿದೆ
ಮಹಾತ್ಮಗಾಂಧಿ ನರೇಗಾ ಯೋಜನೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಸೌಲಭ್ಯ ಕಲ್ಪಿಸಿದೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಮೇ 30 :
ಮಹಾತ್ಮಗಾಂಧಿ ನರೇಗಾ ಯೋಜನೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಸೌಲಭ್ಯ ಕಲ್ಪಿಸಿದೆ. ಈ ಯೋಜನೆಗಳ ಸದುಪಯೋಗ ಬಡವರು, ಕೂಲಿ ಕಾರ್ಮಿಕರು, ರೈತರಿಗೆ ಪಡೆದುಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೌಡಪ್ಪ ಮಾಳೇದ ಹೇಳಿದರು.
ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಬೆಟಗೇರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಮದ ಗ್ರಾಪಂ ಕಾರ್ಯಾಲಯದಲ್ಲಿ ಇಚೆಗೆ ನಡೆದ ಮಹಾತ್ಮ ಗಾಂಧಿ ರಾಷ್ಷ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಮಾಸಾಚರಣೆ ಪ್ರಯುಕ್ತ ಬದು ನಿರ್ಮಾಣ ಅಭಿಯಾನ ಪ್ರಚಾರ ವಾಹಿನಿ ಮೂಲಕ ರೈತರ ತಿಳುವಳಿಕೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಂಡು-ಹೆಣ್ಣಿಗೆ ಸಮಾನ ಕೂಲಿ ಇದೆ. ಕೂಲಿ ಕಾರ್ಮಿಕರಿಂದ ರೈತರು ತಮ್ಮ ಜಮೀನುಗಳಲ್ಲಿ ಕೃಷಿಹೊಂಡ, ಬದು ನಿರ್ಮಾಣ ಸೇರಿದಂತೆ ಭೂ ಮತ್ತು ತೋಟಗಾರಿಕೆ ಅಭಿವೃದ್ಧಿಯ ಕಾಮಗಾರಿಗಳನ್ನು ಕೈಗೊಳ್ಳಬಹುದು. ಸಣ್ಣ ರೈತರಿಗೆ ಸಾಕಷ್ಟು ಸೌಲಭ್ಯಗಳಿವೆ ಎಂದು ಮಹಾತ್ಮ ಗಾಂಧಿ ರಾಷ್ಷ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮಾಹಿತಿ, ಶಿಕ್ಷಣ, ಸಂವಹನ ಚಟುವಟಿಕೆಯಡಿ ಹಲವಾರು ವಿಷಯಗಳನ್ನು ಸ್ಥಳೀಯ ರೈತರಿಗೆ ತಿಳಿಸಿದರು.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಕಾರ್ಯದರ್ಶಿ ಪರಶುರಾಮ ಇಟಗೌಡ್ರ, ಸುರೇಶ ಬಾಣಸಿ, ವಿಠಲ ಚಂದರಗಿ, ರಾಮಣ್ಣ ಕತ್ತಿ, ಪುಂಡಲೀಕ ಹಾಲಣ್ಣವರ, ಬಾಳಪ್ಪ ಬಾನಸಿ, ಯಲ್ಲಪ್ಪ ಮೇಳೆಣ್ಣವರ, ಚಂದ್ರಪ್ಪ ಕಂಬಿ, ಬಸವರಾಜ ಪಣದಿ, ಈರಪ್ಪ ದಂಡಿನ, ಶಿವಾನಂದ ಐದುಡ್ಡಿ, ರೈತರು, ಮತ್ತೀತರರು ಇದ್ದರು.