RNI NO. KARKAN/2006/27779|Wednesday, December 25, 2024
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ 

ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 3 :

 

 

ಜಿಲ್ಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಹಾಗೂ ನೂತನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಳೆಯಿಂದ( ಜೂನ್ 4) ಐದು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ಗುರುವಾರ ಬೆಳಿಗ್ಗೆ 9 ಗಂಟೆಗೆ ರಸ್ತೆ ಮೂಲಕ ಗೋಕಾಕಗೆ ಆಗಮಿಸಿ, ಕಾರ್ಯಕರ್ತರ ಭೇಟಿ, ವಾಸ್ತವ್ಯ. ದಿ. 5 ರಂದು ಬೆಳಿಗ್ಗೆ 9 ಗಂಟೆಗೆ ಗೋಕಾಕ್ ದಿಂದ ಹೊರಟು 11 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ, 12 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊರೊನಾ ಮತ್ತು ನೆರೆ ಹಾವಳಿಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಗೋಕಾಕನಲ್ಲಿ ವಾಸ್ತವ್ಯ.
ದಿ. 6 ರಂದು ಬೆಳಿಗ್ಗೆ 11 ಗಂಟೆಗೆ ಗೋಕಾಕ ನಗರ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆಯಲ್ಲಿ ಭಾವಹಿಸಲಿದ್ದಾರೆ. ಗೋಕಾಕದಲ್ಲಿ ವಾಸ್ತವ್ಯ. ದಿ. 7ರಂದು ಬೆಳಿಗ್ಗೆ 9.30ಕ್ಕೆ ಗೋಕಾಕ್ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ. ದಿ. 8ರಂದು ಬೆಳಿಗ್ಗೆ 9 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮಾರಂಗಪ್ಪನವರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Related posts: