RNI NO. KARKAN/2006/27779|Friday, December 13, 2024
You are here: Home » breaking news » ಬೆಂಗಳೂರು:ನಾಮಪತ್ರ ಸಲ್ಲಿಸಿದ ಬಳಿಕ ಬೆಂಗಳೂರಿನಲ್ಲಿ ಬಾಲಚಂದ್ರ ಅವರನ್ನು ಭೇಟಿ ಮಾಡಿದ ಕಡಾಡಿ

ಬೆಂಗಳೂರು:ನಾಮಪತ್ರ ಸಲ್ಲಿಸಿದ ಬಳಿಕ ಬೆಂಗಳೂರಿನಲ್ಲಿ ಬಾಲಚಂದ್ರ ಅವರನ್ನು ಭೇಟಿ ಮಾಡಿದ ಕಡಾಡಿ 

ನಾಮಪತ್ರ ಸಲ್ಲಿಸಿದ ಬಳಿಕ ಬೆಂಗಳೂರಿನಲ್ಲಿ ಬಾಲಚಂದ್ರ ಅವರನ್ನು ಭೇಟಿ ಮಾಡಿದ ಕಡಾಡಿ

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಂಗಳೂರು ಜೂ 9 :

 
ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಬೆಳಗಾವಿ ವಿಭಾಗೀಯ ಪ್ರಭಾರಿ ಮತ್ತು ಜಿಪಂ ಮಾಜಿ ಅಧ್ಯಕ್ಷ ಈರಣ್ಣ ಕಡಾಡಿ ಅವರು ನಾಮಪತ್ರ ಸಲ್ಲಿಸಿದ ಬಳಿಕ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿರುವ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ. ಎಲ್ಲ ಹಿರಿಯರನ್ನು, ಪಕ್ಷದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು. ಕಡಾಡಿ ಅವರನ್ನು ರಾಜ್ಯಸಭೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವ ಪಕ್ಷದ ಕೇಂದ್ರಿಯ ಸಮೀತಿಯವರಿಗೆ ಕೃತಜ್ಞತೆ ಸಲ್ಲಿಸಿ ಕಡಾಡಿ ಅವರಿಗೆ ಶುಭ ಕೋರಿದರು.
ರಾಜ್ಯಸಭೆ ಅಭ್ಯರ್ಥಿ ಈರಣ್ಣ ಕಡಾಡಿ ಅವರು, ಜಿಲ್ಲೆಯ ಎಲ್ಲ ನಾಯಕರುಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗುವುದು. ತಮ್ಮ ಮೇಲೆ ವಿಶ್ವಾಸವನ್ನಿಟ್ಟು ರಾಜ್ಯಸಭೆ ಟಿಕೇಟ್ ನೀಡಿರುವುದಕ್ಕೆ ಪಕ್ಷದ ನಾಯಕರುಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ 32 ವರ್ಷಗಳಿಂದ ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿ ಪಕ್ಷವನ್ನು ಕಟ್ಟಲು ದುಡಿದಿದ್ದೇನೆ. ಅದರ ಪ್ರತಿಫಲವೇ ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದೆ. ಕನಸಿನಲ್ಲಿಯೂ ರಾಜ್ಯಸಭೆಗೆ ಹೋಗುತ್ತೇನೆಂದು ಭಾವಿಸಿಕೊಂಡಿರಲಿಲ್ಲವೆಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಅಧ್ಯಕ್ಷ ಮತ್ತು ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts: