ಗೋಕಾಕ:ಪರಿಸರ ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ : ಖಾನಪ್ಪನವರ
ಪರಿಸರ ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ : ಖಾನಪ್ಪನವರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 10 :
ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮ ಹೊಣೆ. ಆದರೆ ಅದು ನಮ್ಮಿಂದ ಸಾಧ್ಯವಾಗದೆಹೋಗುತ್ತಿರುವುದು ಶೋಚನೀಯ ಸಂಗತಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು
ಬುಧವಾರದಂದು ನಗರದ ವಿದ್ಯಾ ನಗರದಲ್ಲಿ ಅರಣ್ಯ ಮತ್ತು ಕರವೇಯ ಸಂಯುಕ್ತಾಶ್ರಯದಲ್ಲಿ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ ಅವರ 54ನೇ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ವನಮೋಹತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು
ಜೂನ್ ತಿಂಗಳಿಗೆ ಒಂದು ವಿಶೇಷತೆ ಇದೆ. ಇದು ವಿಶ್ವ ಪರಿಸರ ದಿನಾಚರಣೆಯ ತಿಂಗಳು. ಇದು ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಮಹತ್ವವನ್ನು ಅರಿಯುವ ಹಾಗೂ ಈ ದಿನಗಳಲ್ಲಿ ನಮ್ಮ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದದ್ದನ್ನು ನೆನಪಿಸುವ ಮಹತ್ತರವಾದ ತಿಂಗಳು ಇದರ ಮಹತ್ವವನ್ನು ಅರಿತು ನಾವು ಗಿಡಮರಗಳನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಖಾನಪ್ಪನವರ ಹೇಳಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ , ಅಧಿಕಾರಿಗಳಾದ ಹನಮಂತ ಇಂಗಳಗಿ , ಮಹಾಂತೇಶ ಜಾಮುನಿ , ಕರವೇಯ ಸಾದಿಕ ಹಲ್ಯಾಳ , ಕೃಷ್ಣಾ ಖಾನಪ್ಪನವರ , ಮಂಜುನಾಥ ಪ್ರಭುನಟ್ಟಿ , ಲಕ್ಷ್ಮಣ ಯಮಕನಮರಡಿ , ಮುಗುಟ ಪೈಲವಾನ, ಯಲ್ಲಪ್ಪ ಧರ್ಮಟ್ಟಿ, ಹನುಮಂತ ಅಮ್ಮಣಗಿ, ಕಿರಣ ವಾಲಿ, ರಮೇಶ ಖಾನಪ್ಪನವರ ನಾಕಾ , ಪಾರೂಕ ಕಲ್ಲೋಳಿ, ಹುಸೇನ ಮಿರ್ಜಾನಾಯಿಕ, ಸಂತೋಷ ಕೋಲಕಾರ ಸೇರಿದಂತೆ ಇತರರು ಇದ್ದರು