ಗೋಕಾಕ:ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತ : ಮುರುಘರಾಜೇಂದ್ರ ಶ್ರೀ
ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತ : ಮುರುಘರಾಜೇಂದ್ರ ಶ್ರೀ
ನಮ್ಮ ಬೆಳಗಾವಿ ಇ- ವಾರ್ತೆ , ಗೋಕಾಕ ಜೂ 15 :
ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ, ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದೇ ಶಾಶ್ವತವೆಂದು ಇಲ್ಲಿಯ ಶೂನ್ಯ ಸಂಪಾದನಾಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ಇಲ್ಲಿಯ ವಿವೇಕಾನಂದ ನಗರದ ಜೆಸಿಐ ಸಂಸ್ಥೆಯ ಸಭಾ ಭವನದಲ್ಲಿ ಜೆಸಿಐ ಸಂಸ್ಥೆಯಿಂದ ಇತ್ತಿಚೆಗೆ ವರ್ಗಾವಣೆಗೊಂಡ ಡಿವಾಯ್‍ಎಸ್‍ಪಿ ಪ್ರಭು ಡಿ.ಟಿ. ಹಾಗೂ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವಿ.ಎಸ್.ತಡಸಲೂರ ಅವರ ಬೀಳ್ಕೂಡುವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡುತ್ತಿದ್ದರು.
ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಶಾಂತಿಯುತ ವಾತವಾರಣ ನಿರ್ಮಾಣದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಒಳ್ಳೆಯ ಕಾರ್ಯ ಮಾಡುವ ಅಧಿಕಾರಿಗಳನ್ನು ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರು ಪೌರ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ನಾವು ಜಾಗೃತರಾಗಿ ಅಧಿಕಾರಿಗಳಿಗೆ ಸಹಕಾರ ನೀಡಿದರೇ ಒಳ್ಳೆಯ ಕಾರ್ಯಗಳಾಗುತ್ತವೆ. ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ ಸೇರಿದಂತೆ ಸಾಕಷ್ಟು ಸಮಾಜಮುಖಿ ಕಾರ್ಯ ಮಾಡುತ್ತಿರುವ ಜೆಸಿಐ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದ ಶ್ರೀಗಳು ಸಂಸ್ಥೆಯಿಂದ ಇನ್ನೂ ಹೆಚ್ಚಿನ ಕಾರ್ಯಗಳು ಆಗಲಿ ಎಂದು ಹಾರೈಸಿದರು.
ವೇದಿಕೆ ಮೇಲೆ ವಲಯ ಅರಣ್ಯಾಧಿಕಾರಿ ಕೆ.ಎನ್.ವಣ್ಣೂರ, ಪೌರಾಯುಕ್ತ ಶಿವಾನಂದ ಹಿರೇಮಠ, ನಿವೃತ್ತ ಪೌರಾಯುಕ್ತ ಎಮ್.ಎಚ್.ಅತ್ತಾರ, ಜೆಸಿಐ ಸಂಸ್ಥೆಯ ರಾಷ್ಟ್ರೀಯ ಸಂಯೋಜಕ ವಿಷ್ಣು ಲಾತೂರ, ಅಧ್ಯಕ್ಷ ರಜನಿಕಾಂತ ಮಾಳೋದೆ, ಪದಾಧಿಕಾರಿಗಳಾದ ಕೆಂಪಣ್ಣ ಚಿಂಚಲಿ ಇದ್ದರು.
ರವಿ ಮಾಲದಿನ್ನಿ ಸ್ವಾಗತಿಸಿದರು, ಮೀನಾಕ್ಷಿ ಸವದಿ ನಿರೂಪಿಸಿದರು, ರಾಚಪ್ಪ ಅಮ್ಮಣಗಿ ವಂದಿಸಿದರು.