ಗೋಕಾಕ:ಅಬಿವೃದ್ದಿ ಕಾರ್ಯಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸೂಚನೆ
ಅಬಿವೃದ್ದಿ ಕಾರ್ಯಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸೂಚನೆ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 17 :
ಮಾರ್ಕಂಡೆಯ , ಜಿ.ಆರ್.ಬಿ.ಸಿ ಸೇರಿದಂತೆ ನೀರಾವರಿಗೆ ಸಂಬಂಧಿಸಿದ ಎಲ್ಲ ಅಬಿವೃದ್ದಿ ಕಾರ್ಯಗಳನ್ನು ಒಂದು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಬುಧವಾರದಂದು ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಕೊರೋನಾ ಮತ್ತು ಪ್ರವಾಹ ದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತಾಲೂಕಾ ಮಟ್ಟದ ಎಲ್ಲಾ ಅಧಿಕಾರಿಗಳು ಜಾತಿ , ಪಕ್ಷಭೇದ ಮರೆತು ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮಾಡಿ ಮುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಗೋಕಾಕ ನಗರದ ಸೌಂದರ್ಯವನ್ನು ಹೆಚ್ಚಿಸಲು ರಸ್ತೆಗಳನ್ನು ಅಗಲು ಮಾಡಲಾಗಿದೆ . ಆದರು ಜನದಟ್ಪನೆ ಇಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ . ಬೀದಿ ಬದಿ ವ್ಯಾಪಾಸ್ಥರಿಗೆ ತೊಂದರೆ ಯಾಗದಂತೆ ಜನದಟ್ಪನೆ ನಿಯಂತ್ರಿಸಲು ಕಠಿಣ ಕ್ರಮ ಕೈಗೊಂಡು ರಸ್ತೆಗಳಲ್ಲಿ ಜನದಟ್ಪನೆ ಆಗದಂತೆ ನಿಗಾ ವಹಿಸಬೇಕೆಂದು ಸಚಿವರು ಪೊಲೀಸ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು
ಎಸ್.ಎಲ್.ಎಸ್.ಸಿ ಪರೀಕ್ಷೆ ಸಮೀಪಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿ ಕೋಠಡಿಯಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ತಗೆದುಕೊಂಡು ಕೊರೋನಾಗೆ ಸಂಬಂಧಿಸಿದಂತೆ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷಾರ್ಥಿಗಳಿಗೆ ಯಾವದೆ ಆರೋಗ್ಯ ತೊಂದರೆ ಆಗದಂತೆ ಕ್ರಮ ಜರುಗಿಸಬೇಕೆಂದು ಸಚಿವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು ಲಾಕಡೌನ ಸಡಿಲಿಕೆಯಾಗಿದ್ದರಿಂದ ಜನರು ಸಾಮಾಜಿಕ ಅಂತರದ ಕಡೆ ಹೆಚ್ಚು ಗಮನ ಹರಿಸುತ್ತಿಲ್ಲ ,ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಬಂದವರಿಗೆ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ ಮತ್ತು ಹೋಂ ಕ್ವಾರಂಟೈನ ದಂತಹ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಇಲಾಖೆ , ನೀರಾವರಿ , ಸಣ್ಣ ನೀರಾವರಿ, ಹೆಸ್ಕಾಂ , ಪಶುಸಂಗೋಪನೆ, ಕೃಷಿ , ತೋಟಗಾರಿಕೆ ಸೇರಿದಂತೆ ಇತರ ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಿಂದ ಕೈಗೊಂಡು ಕಾರ್ಯಗಳ ಮತ್ತು ಪ್ರವಾಹ ಎದುರಾದರೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಸಚಿವರಿಗೆ ವಿವರಿಸಿದರು .
ನಂತರ ತಾಲೂಕಾಡಳಿತದ ಪರವಾಗಿ ಸಚಿವರಿಗೆ ಸತ್ಕರಿಸಿ , ಗೌರವಿಸಲಾಯಿತು
ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಿಕ, ತಾಪಂ ಅಧ್ಯಕ್ಷೆ ಶ್ರೀಮತಿ ಸುನಂದಾ ಕರದೇಸಾಯಿ , ಗೋಕಾಕ ಡಿವಾಯ್ಎಸ.ಪಿ ಉಪಸ್ಥಿತರಿದ್ದರು