RNI NO. KARKAN/2006/27779|Friday, November 8, 2024
You are here: Home » breaking news » ಗೋಕಾಕ:ಕರೊನಾ ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು : ಡಾ. ರಾಜೇಶ್ವರಿ ಹಿರೇಮಠ

ಗೋಕಾಕ:ಕರೊನಾ ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು : ಡಾ. ರಾಜೇಶ್ವರಿ ಹಿರೇಮಠ 

ಕರೊನಾ ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು : ಡಾ. ರಾಜೇಶ್ವರಿ ಹಿರೇಮಠ

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜೂ 18 :

 

ಕರೊನಾ ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಹಾಗೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗುರುವಾರ ಜೂ.18 ರಂದು ನಡೆದ ಮಾಸ್ಕ್ ದಿನ ಆಚರಣೆ ಪ್ರಯುಕ್ತ ಸ್ಥಳೀಯರಿಗೆ ಮಾಸ್ಕ್ ವಿತರಿಸಿ ಮಾತನಾಡಿ, ಕೋವಿಡ್ ಮಹಾ ಮಾರಿಯನ್ನು ದೂರವಿಡಲು ಸದಾ ಮಾಸ್ಕ್ ಬಳಸುವುದು ಅಗತ್ಯವಾಗಿದೆ. ಕರೊನಾ ಹರಡದಂತೆ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಗ್ರಾಮಸ್ಥರಿಗೆ ತಿಳಿಸಿದರು.
ಸ್ಥಳೀಯ ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ಗ್ರಾಮದ ಪ್ರಮುಖ ಸ್ಥಳ, ಮನೆ ಮನೆಗೆ ತೆರಳಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಜನ ಜಾಗೃತಿ ಕಾರ್ಯಕ್ರಮ ಕೈಗೊಂಡರು.
ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಮಾಲಾ ದೇಯಣ್ಣವರ, ಅಂಜನಾ ಬಡಿಗೇರ, ಲಕ್ಷ್ಮೀ ಬಳಿಗಾರ, ಸಕುಬಾಯಿ ಕಂಬಾರ, ಭಾರತಿ ಅಜ್ಜನಕಟ್ಟಿ, ಶೋಭಾ ವೀರ್ಣೆಕರ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಪಂ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು, ಗ್ರಾಮಸ್ಥರು, ಇತರರು ಇದ್ದರು.

Related posts: