ಗೋಕಾಕ:ನೂತನ ಗಣಪತಿ ಗುಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮ
ನೂತನ ಗಣಪತಿ ಗುಡಿ ಕಟ್ಟಡ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜೂ 20 :
ಗ್ರಾಮದ ವಿವಿಧ ಸಂಘ-ಸಂಸ್ಥೆಗಳು, ಹಲವಾರು ಜನ ಮುಖಂಡರು, ಗಣ್ಯರು, ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಗಣಪತಿ ಗುಡಿ ನಿರ್ಮಾಣವಾಗಲಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಈಶ್ವರ ಬಳಿಗಾರ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಜೂ.20ರಂದು ನಡೆದ ನೂತನ ಗಣಪತಿ ಗುಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಊರಿನ ಸಮಗ್ರ ಅಭಿವೃದ್ಧಿಗೆ ಸ್ಥಳೀಯರ ಸಹಾಯ ಸಹಕಾರ ಅವಶ್ಯಕವಾಗಿದೆ ಎಂದರು.
ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಳೀಯರು ನೀಡುತ್ತಿರುವ ಸಹಾಯ, ಸಹಕಾರದ ಕಾರ್ಯವನ್ನು ಶ್ಲಾಘಿಸಿದರು. ವಿಜಯ ಹಿರೇಮಠ ಸಾನಿಧ್ಯ ವಹಿಸಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿದರು. ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಚಂದ್ರಶೇಖರ ಪುರಂದರೆ, ರವಿ ಉಪ್ಪಾರ, ಬಸವರಾಜ ಪಣದಿ, ರಾಮಣ್ಣ ಮುಧೋಳ, ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಡಾ.ಸಂಜೀವ ಹಂಜಿ, ಈರಪ್ಪ ಬಳಿಗಾರ, ಶಿವು ನಾಯ್ಕರ, ಸುರೇಶ ಬಾಣಸಿ, ಸರೋಜಾ ಬಿಸನಾಳ, ಸರೋಜಾ ಮಟಗಿ, ರಾಘವೇಂದ್ರ ಬೆಟಗೇರಿ, ಕಲ್ಲಪ್ಪ ದಂಡಿನ, ಮಂಜು ಪತ್ತಾರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಇದ್ದರು.