RNI NO. KARKAN/2006/27779|Sunday, December 22, 2024
You are here: Home » breaking news » ಗೋಕಾಕ:ದೇಶಿಯ ವಸ್ತುಗಳನ್ನು ಬಳಕೆ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡೋಣ : ಸಚಿವೆ ಶಶಿಕಲಾ

ಗೋಕಾಕ:ದೇಶಿಯ ವಸ್ತುಗಳನ್ನು ಬಳಕೆ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡೋಣ : ಸಚಿವೆ ಶಶಿಕಲಾ 

ದೇಶಿಯ ವಸ್ತುಗಳನ್ನು ಬಳಕೆ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡೋಣ : ಸಚಿವೆ ಶಶಿಕಲಾ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 22 :

 

 

ದೇಶಿಯ ವಸ್ತುಗಳನ್ನು ಬಳಕೆ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ಸದೃಢ ಮಾಡೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿಯ ಗೋಕಾಕ ನಗರ ಮತ್ತು ಗೋಕಾಕ ಗ್ರಾಮೀಣ ಮಂಡಲದ ಮಹಿಳಾ ಆಯಾಮದ ಫಲಾನುಭವಿಗಳ ವರ್ಚುವಲ್ ರ್ಯಾಲಿಯ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಮೊದಿ ಸರಕಾರ 2.0 ಸಾಧನೆಗಳ ಕುರಿತು ಮಾತನಾಡುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತ್ರತ್ವದ ಸರಕಾರದಿಂದ ಮಹಿಳೆಯರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಮಹಿಳಾ ಆಯಾಮದ ಫಲಾನುಭವಿಗಳ ವರ್ಚುವಲ್ ರ್ಯಾಲಿಯಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕಗಳನ್ನು ಧರಿಸಿ 100ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಹನಮಂತ ದುರ್ಗನ್ನವರ, ಸುರೇಶ ಸನದಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಷ್ಮಾ ಖನಗಾಂವಿ, ಶ್ರೀದೇವಿ ತಡಕೋಡ, ಲಕ್ಷ್ಮೀ ಪಾಟೀಲ, ಜ್ಯೋತಿ ಕೋಲಾರ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಇದ್ದರು.

Related posts: