ಘಟಪ್ರಭಾ:ಎಸ್.ಎಸ್.ಎಲ್.ಸಿ ಪರೀಕ್ಷೆ ಸಕಲ ಸಿದ್ಧತೆ : ಬಿಇಓ ಅಜೀತ ಮನ್ನಿಕೇರಿ
ಎಸ್.ಎಸ್.ಎಲ್.ಸಿ ಪರೀಕ್ಷೆ ಸಕಲ ಸಿದ್ಧತೆ : ಬಿಇಓ ಅಜೀತ ಮನ್ನಿಕೇರಿ
ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಜೂ 23 :
ದೇಶದಲ್ಲಿ ಕೋವಿಡ-19 ಲಾಕ ಡೌನ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ದಿ.25ರಂದು ಪ್ರಾರಂಭವಾಗಲಿದ್ದು, ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಮೂಡಲಗಿ ವಲಯದ ಕ್ಷೇತ್ರ ಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ತಿಳಿಸಿದರು.
ಅವರು ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡುತ್ತ, ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಿದ್ದು, ಇವುಗಳಲ್ಲದೇ 8 ಉಪ ಪರೀಕ್ಷಾ ಕೇಂದ್ರಗಳನ್ನು ಸೇರಿಸಿ 26 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದೆ. ಈಗಾಗಲೇ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೆನಿಟೈಜರ್ ಸಿಂಪರಣೆ ಮಾಡಲಾಗಿದೆ.
ಒಟ್ಟು 6065 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಕೇಂದ್ರಗಳಲ್ಲಿ ಒಂದು ಬಾಲಕರಿಗೆ ಹಾಗೂ ಬಾಲಕಿಯರಿಗೆ ಎರಡು ಪ್ರತ್ಯೇಕ ಕೌಂಟರ್ ತೆರೆಯಲಾಗಿದ್ದು, ಎಲ್ಲರಿಗೂ ಮಾಸ್ಕ ವಿತರಿಸುವರೊಂದಿಗೆ ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು ಥರ್ಮಲ್ ಟೆಂಪರೇಚರ ತಪಾಸಣೆ ಹಾಗೂ ಸೆನಿಟೈಜರ ಸಿಂಪರಣೆ ನಂತರ ಪರೀಕ್ಷೆ ಕೊಠಡಿ ಹೋಗಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿ ನಡುವೆ ಒಂದು ಮೀಟರ ಅಂತರ ಇಡಲಾಗಿದೆ. ಅಲ್ಲದೇ ದಿ.25 ರಿಂದ ಕೇಂದ್ರದ ಸುತ್ತ 200 ಮೀಟರ್ 144 ಕಲಂ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೊಠಡಿ ಹತ್ತಿರ ಆರೋಗ್ಯ ಕೌಂಟರ ನಿರ್ಮಿಸಲಾಗಿದೆ. ಇಲ್ಲಿ ಸ್ಟಾಪ್ ನರ್ಸ ಕಾರ್ಯನಿರ್ವಹಿಸಿತ್ತಾರೆ. ಈ ರೀತಿಯ ಮುಂಜಾಗ್ರತಾ ವ್ಯವಸ್ಥೆಯಿಂದ ಪರೀಕ್ಷೆ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗೆ ಹಾಜರಾಗಬೇಕೆಂದು ಮೂಡಲಗಿ ಬಿ.ಇ.ಓ ಅಜಿತ ಮನ್ನಿಕೇರಿ ಪತ್ರಿಕೆಗೆ ತಿಳಿಸಿದರು.