ಗೋಕಾಕ:ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು : ಸಚಿವ ರಮೇಶ ಜಾರಕಿಹೊಳಿ
ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು : ಸಚಿವ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 24 :
ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಎನ್ನುವ ಪರೀಕ್ಷೆಯು ಮಹತ್ವದ ಘಟ್ಟವಾಗಿದ್ದು ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕೆಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಬುಧವಾರದಂದು ಪತ್ರಿಕೆಯೊಂದಿಗೆ ಮಾತನಾಡಿದ ಕೊರೋನಾ ವೈರಸ್ ಬಿಕ್ಕಟಿನ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿ. 25 ರಿಂದ ಪ್ರಾರಂಭವಾಗಲಿದ್ದು, ಇದ್ದಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಯೊಂದಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಪಾಲಕರು ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ. ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಎಂದು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ಮಾಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುಬೇಕು. ನಾಡಿನ ಎಲ್ಲ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಚೆನ್ನಾಗಿ ಬರೆಯಬೇಕೆಂದು ಶುಭ ಹಾರೈಸಿದ್ದಾರೆ.