ಗೋಕಾಕ:ಎಸ್ಸೆಸ್ಸೆಲ್ಸಿ ವಾರ್ಷಿಕ ಅಣಕು ಪರೀಕ್ಷೆ ಆಯೋಜನೆ
ಎಸ್ಸೆಸ್ಸೆಲ್ಸಿ ವಾರ್ಷಿಕ ಅಣಕು ಪರೀಕ್ಷೆ ಆಯೋಜನೆ
ನಮ್ಮ ಬೆಳಗಾವಿ ಇ – ವಾರ್ತೆ ,ಬೆಟಗೇರಿ ಜೂ 24 :
ಗ್ರಾಮದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ವಿದ್ರ್ಯಾಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ತಪ್ಪದೇ ಮಾಸ್ಕ್ ಧರಿಸಿ ಧೈರ್ಯದಿಂದ ಪರೀಕ್ಷೆ ಬರೆಯಬೇಕು. ಭಯಪಡುವ ಅಗತ್ಯವಿಲ್ಲ. ಕರೊನಾ ಸುರಕ್ಷತೆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ಹೇಳಿದರು. ಜೂ.25 ರಿಂದ ಜು.4 ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳಿಗೆ ಬುಧವಾರ ಜೂನ್.24 ರಂದು ನಡೆದ ಕರೊನಾ ಸುರಕ್ಷತಾ ಕ್ರಮಗಳ ಮಾಹಿತಿ ನೀಡುವ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಅಣಕು ಪರೀಕ್ಷೆ ಆಯೋಜನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಥಳೀಯ ಸರ್ಕಾರಿ ಪ್ರೌಢ ಶಾಲೆ ಮತ್ತು ಚೈತನ್ಯ ಶಾಲೆ ಸೇರಿ 2 ಕಡೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದೆ. ಒಟ್ಟು 21 ಪರೀಕ್ಷಾ ಕೊಠಡಿಗಳಲ್ಲಿ ಒಟ್ಟು 409 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 8 ಜನ ವಲಸೆ ಬಂದ ವಿದ್ಯಾರ್ಥಿಗಳಿದ್ದಾರೆ. ಅಲ್ಲದೇ 2 ಪರೀಕ್ಷಾ ಕೇಂದ್ರದಲ್ಲಿ ಒಂದೂಂದು ವಿಶೇಷ ಪರೀಕ್ಷಾ ಕೊಠಡಿ ಕಾಯ್ದಿರಿಸಲಾಗಿದೆ. 30 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ ಒಬ್ಬರು, ಓರ್ವ ಕಸ್ಟೊಡಿಯನ್, ಪರೀಕ್ಷಾ ಕೇಂದ್ರದ ಸಹಾಯಕರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಹಾಯಕರು ಆಶಾ ಕಾರ್ಯಕರ್ತೆಯರು, ಸ್ಕೌಟ್ ಮತ್ತು ಗೈಡ್ ಪ್ರತಿನಿಧಿಗಳು ಸೇರಿದಂತೆ ಹೆಚ್ಚುವರಿಯಾಗಿ ಕೆಲವು ಜನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಇಲ್ಲಿಯ ಪರೀಕ್ಷಾ ಕೇಂದ್ರಕ್ಕೆ ಬೇರೆ ಊರುಗಳಿಂದ ಬರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ ಸುಮಾರು 200 ಮೀಟರ್ ಅಂತರದಲ್ಲಿ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿದೆ. ನಕಲು ನಡೆಯದಂತೆ ಸಿಸಿ ಕ್ಯಾವiರಾ ಹಾಗೂ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜನೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಹಾಗೂ ಸರ್ಕಾರದ ನೀತಿ ನಿಯಮಗಳಂತೆ ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಮತ್ತು ಕರೊನಾ ಸುರಕ್ಷತೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದರು. ಅಣಕು ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಸ್ಥಳೀಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಬುಧವಾರದಂದು ಮುಂಜಾನೆ 10.30 ರಿಂದ 1.30 ಗಂಟೆಯ ತನಕ ಇಂಗ್ಲೀಷ್ ವಿಷಯದ ಕುರಿತು ಅಣಕು ಪರೀಕ್ಷೆ ಬರೆದರು. 2 ಪರೀಕ್ಷಾ ಕೇಂದ್ರದ ಒಟ್ಟು 409 ಜನ ವಿದ್ಯಾರ್ಥಿಗಳಲ್ಲಿ 4 ಜನ ವಿದ್ಯಾರ್ಥಿಗಳು ಮಾತ್ರ ಗೈರು ಹಾಜರಾಗಿದ್ದರೆ 405 ಜನ ವಿದ್ಯಾರ್ಥಿಗಳು ಅಣಕು ಪರೀಕ್ಷೆಗೆ ಹಾಜರಾಗಿದ್ದರು. 2 ಪರೀಕ್ಷಾ ಕೇಂದ್ರದ 21 ಪರೀಕ್ಷಾ ಕೊಠಡಿಗಳಲ್ಲಿ 30 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಮುಖ್ಯ ಅಧಿಕ್ಷಕರು, ಒಬ್ಬರು ಕಸ್ಟೋಡಿಯನ್, ಪರೀಕ್ಷಾ ಕೇಂದ್ರದ ಸಹಾಯಕರು ಸೇರಿದಂತೆ ಎಲ್ಲಾ ಪರೀಕ್ಷಾ ಕೇಂದ್ರದ ಸಿಬ್ಬಂದಿ ಕರ್ತವ್ಯ ನಿರತರಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು. ಇಂದು ಸಹ ಕರೊನಾ ಸುರಕ್ಷತೆ ಹಿತದೃಷ್ಟಿಯಿಂದ ಎಲ್ಲಾ ಮನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಮಾಹಿತಿ ಮತ್ತು ಕ್ರಮ ಕೈಗೊಳ್ಳಲಾಯಿತು. ಈ ವೇಳೆ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಸಹಾಯಕರು, ಪೊಲೀಸ್ ಸಿಬ್ಬಂದಿ, ಶಾಲೆಯ ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಇತರರು ಇದ್ದರು.