ಗೋಕಾಕ:ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಿರಿ : ಈರಣ್ಣ ಕಡಾಡಿ
ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಿರಿ : ಈರಣ್ಣ ಕಡಾಡಿ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜೂ 24 :
ರಾಜ್ಯದಲ್ಲಿ ಗುರುವಾರ ಜೂ.25ರಿಂದ ಜು.4ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆಯಲಿವೆ. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯಿರಿ. ಭಯಪಡುವ ಅಗತ್ಯವಿಲ್ಲ. 10ನೇ ತರಗತಿ ವಾರ್ಷಿಕ ಪರೀಕ್ಷೆ ಹಾಗೂ ಕರೊನಾ ಸುರಕ್ಷತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಲ್ಲಿ ಕರೊನಾ ಸುರಕ್ಷತೆ ದೃಷ್ಟಿಯಿಂದ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ವಿದ್ಯಾರ್ಥಿಗಳು ಮಹಾಮಾರಿ ಭಯದಿಂದ ವಿಚಲಿತರಾಗದೇ ಸಾಮಾಜಿಕ ಅಂತರ ಕಾಪಾಡಿಕೊಂಡು, ತಪ್ಪದೇ ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ, ವಿದ್ಯಾರ್ಥಿ ಬದುಕಿನಲ್ಲಿ 10ನೇ ತರಗತಿ ಮಹತ್ತರ ಘಟ್ಟವಾಗಿದೆ. ಇಂದಿನಿಂದ ಎಸ್ಸೆಸ್ಸಲ್ಸಿ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಸರಿಯಾಗಿ ತಮ್ಮ ತಮ್ಮ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬೇಕು. ಪ್ರಸಕ್ತ ವರ್ಷದ ಎಸ್ಸೆಸ್ಸಲ್ಸಿ ವಾರ್ಷಿಕ ಪರೀಕ್ಷೆ ಬರೆಯಲಿರುವ ಕನ್ನಡ ನಾಡಿನ ಪ್ರಸಕ್ತ ಸಾಲಿನ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಶುಭ ಹಾರೈಸಿದ್ದಾರೆ.