ಗೋಕಾಕ:ಪರೀಕ್ಷೆ ಬರೆದು ಪರೀಕ್ಷಾ ಕೊಠಡಿಯಿಂದ ನಗುಮುಖದೊಂದಿಗೆ ಹೊರ ಬರುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷಾರ್ಥಿಗಳು
ಪರೀಕ್ಷೆ ಬರೆದು ಪರೀಕ್ಷಾ ಕೊಠಡಿಯಿಂದ ನಗುಮುಖದೊಂದಿಗೆ ಹೊರ ಬರುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷಾರ್ಥಿಗಳು
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಜೂ 25 :
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭಗೊಂಡ ಹಿನ್ನಲೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಮತ್ತು ಚೈತನ್ಯ ಶಾಲೆ ಸೇರಿ 2 ಕಡೆ ಸ್ಥಾಪಿಸಲಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮೊದಲ ದಿನ ಜೂ.25 ರಂದು ಇಂಗ್ಲೀಷ್ ವಿಷಯದ ಪರೀಕ್ಷೆ ನಡೆಯಿತು.
ಗ್ರಾಮದ 2 ಪರೀಕ್ಷಾ ಕೇಂದ್ರದಲ್ಲಿ 21 ಪರೀಕ್ಷಾ ಕೊಠಡಿಯಲ್ಲಿ ಒಟ್ಟು 409 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಸುಮಾರು 200 ಮೀಟರ್ ಅಂತರದಲ್ಲಿ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿದೆ. ನಕಲು ನಡೆಯದಂತೆ ಸಿಸಿ ಕ್ಯಾಮರಾ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜನೆ ಮಾಡಲಾಗಿತ್ತು.
ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 30 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ ಒಬ್ಬರು, ಓರ್ವ ಕಸ್ಟೊಡಿಯನ್, ಪರೀಕ್ಷಾ ಕೇಂದ್ರದ ಸಹಾಯಕರು, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಹಾಯಕರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸ್ಕೌಟ್ ಪ್ರತಿನಿಧಿಗಳು ಸೇರಿದಂತೆ ಹೆಚ್ಚುವರಿಯಾಗಿ ಕೆಲವು ಜನ ಸಿಬ್ಬಂದಿ ಕಾರ್ಯನಿರ್ವಹಿಸಿದರು.
ಇಲ್ಲಿಯ ಪರೀಕ್ಷಾ ಕೇಂದ್ರಕ್ಕೆ ಬೇರೆ ಊರುಗಳಿಂದ ಬರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೊನಾ ಸುರಕ್ಷತೆ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದರು.
ಇಂಗ್ಲೀಷ್ ವಿಷಯದ ಪರೀಕ್ಷೆ ಬರೆದು ಪರೀಕ್ಷಾ ಅವಧಿ ಮುಗಿದ ಬಳಿಕ ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸಿರುವ ಅಂಕಗಳ ಕುರಿತು ತಮ್ಮ ತಮ್ಮಲ್ಲಿ ಲೆಕ್ಕಾಚಾರ ಮಾಡುತ್ತಾ ನಗು ಮೊಗದಲ್ಲಿ ಪರೀಕ್ಷಾ ಕೇಂದ್ರದ ಕೊಠಡಿಯಿಂದ ಹೊರ ಬಂದರು.