RNI NO. KARKAN/2006/27779|Thursday, November 7, 2024
You are here: Home » breaking news » ಗೋಕಾಕ:ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆ ಗಳು ಅನುಷ್ಠಾನ : ಸಚಿವ ರಮೇಶ

ಗೋಕಾಕ:ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆ ಗಳು ಅನುಷ್ಠಾನ : ಸಚಿವ ರಮೇಶ 

ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆ ಗಳು ಅನುಷ್ಠಾನ : ಸಚಿವ ರಮೇಶ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 28 :

 
ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗದಿಂದ ಪ್ರತಿಭಾನ್ವಿತರಾಗಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡು ನಾಡಿಗೆ ಕೀರ್ತಿಯನ್ನು ತರುವಂತೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.
ರವಿವಾರದಂದು ನಗರದ ಆಶ್ರಯ ಬಡಾವಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 3.25 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಡಿ.ದೇವರಾಜ ಅರಸು ಮೆಟ್ರಿಕ ನಂತರದ ಬಾಲಕೀಯರ ವಸತಿ ನಿಲಯ ಹಾಗೂ 1 ಕೋಟಿ ರೂಗಳ ವೆಚ್ಚದ ಅಲೆಮಾರಿ/ಅರೆಅಲೆಮಾರಿ ಮಕ್ಕಳ ಆಶ್ರಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮೂಲಭೂತ ಸೌಲಭ್ಯದೊಂದಿಗೆ ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಶ್ರಮಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಶಿಕ್ಷಕರ ಮತ್ತು ಪಾಲಕರ ಸಹಕಾರದಿಂದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿಭೆಗಳಾಗಿ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ಪದವಿಪೂರ್ವ ಮಹಾವಿದ್ಯಾಲಯದಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ 6 ಕೊಠಡಿಗಳು ಮತ್ತು 2 ಶೌಚಾಲಯದ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭಾ ಸದಸ್ಯರಾದ ಎಸ್.ಎ.ಕೋತವಾಲ, ಗಿರೀಶ ಖೋತ, ಜಯಾನಂದ ಹುಣಶ್ಯಾಳ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಬಸವರಾಜ ಆರೆನ್ನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಾಮನಗೌಡ ಕನ್ನೋಳಿ, ತಾಲೂಕಾಧಿಕಾರಿ ಆರ್.ಕೆ.ಬಿಸಿರೊಟ್ಟಿ, ಬಿಇಒ ಜಿ.ಬಿ.ಬಳಗಾರ, ಪದವಿಪೂರ್ವ ಕಾಲೇಜಿನ ಪಾಚಾರ್ಯ ಎ.ವಾಯ್.ಹಾದಿಮನಿ, ಮುಖಂಡರಾದ ಅಶೋಕ ಪಾಟೀಲ, ಆಯ್.ವಿ.ಕೌತನಾಳಿ, ಶಂಕರ ಧರೆನ್ನವರ, ಸಿದ್ದಲಿಂಗ ದಳವಾಯಿ, ಭೀಮಶಿ ಭರಮಣ್ಣವರ , ಮಹಾಂತೇಶ ತಾವಂಶಿ, ಅಮೃತ ದಪ್ಪಿನವರ, ದುರ್ಗಪ್ಪ ಶಾಸ್ತಿಗೊಲ್ಲರ, ಸಿದ್ದಾರ್ಥ ಪಾತ್ರೋಟ, ಶಾಮಾನಂದ ಪೂಜೇರಿ ಸೇರಿದಂತೆ ಅನೇಕರು ಇದ್ದರು.

Related posts: