ಗೋಕಾಕ:ಗೋಕಾಕ ವಲಯದಲ್ಲಿ 122 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು
ಗೋಕಾಕ ವಲಯದಲ್ಲಿ 122 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 1 :
ನಗರದಲ್ಲಿ ಇಂದು ನಡೆದ ಎಸ್ಎಸ್ಎಲ್ಸಿ ಸಮಾಜ ವಿಜ್ಞಾನ ಪರೀಕ್ಷೆಗೆ 4,322 ವಿದ್ಯಾರ್ಥಿಗಳ ಪೈಕಿ 4,200 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 122 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಬಿಇಓ ಜಿ.ಬಿ.ಬಳಗಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಶಿಕ್ಷಣಾಧಿಕಾರಿಗಳು ಗೋಕಾಕ ವಲಯದಲ್ಲಿ ರಾಜ್ಯ ಸರಕಾರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾರ್ಗಸೂಚಿಯನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ ವಿದ್ಯಾರ್ಥಿಗಳು ಕೊರೋನಾ ಬಗ್ಗೆ ನೀಡಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಅತ್ಯಂತ ಉತ್ಸಾಹದಿಂದ ಪಾಲಿಸುತ್ತಿದ್ದಾರೆ ಎಂದು ಬಳಗಾರ ತಿಳಿಸಿದ್ದಾರೆ.