ಗೋಕಾಕ:1 ಲಕ್ಷ 21 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಹೈಮಾಸ್ಕ್ ಬೀದಿ ದೀಪ್‍ಗಳ ಅಳವಡಿಕೆ
1 ಲಕ್ಷ 21 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಹೈಮಾಸ್ಕ್ ಬೀದಿ ದೀಪ್‍ಗಳ ಅಳವಡಿಕೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಜು 9 :
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹೈಮಾಸ್ಕ್ ಬೀದಿ ದೀಪ್‍ಗಳ ಅಳವಡಿಕೆ ಕಂಬ ನಿರ್ಮಾಣ ಕಾಮಗಾರಿ ಇತ್ತೀಚೆಗೆ ನಡೆಯಿತು.
ಸ್ಥಳೀಯ ಗ್ರಾಮ ಪಂಚಾಯತಿ 2019-20ನೇ ಸಾಲಿನ 14 ನೇ ಹಣಕಾಸಿನ ಯೋಜನೆಯ ಅನುದಾನದಡಿಯಲ್ಲಿ ಸುಮಾರು 1 ಲಕ್ಷ 21 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಹೈಮಾಸ್ಕ್ ಬೀದಿ ದೀಪ್‍ಗಳ ಅಳವಡಿಕೆ ಕಂಬ ನಿರ್ಮಿಸಲಾಗಿದೆ ಎಂದು ಪಿಡಿಒ ಎಚ್.ಎನ್.ಬಾವಿಕಟ್ಟಿ ತಿಳಿಸಿದ್ದಾರೆ.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ, ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಪರಶುರಾಮ ಇಟಗೌಡ್ರ, ಗೌಡಪ್ಪ ಮಾಳೇದ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ, ಈರಣ್ಣ ದಂಡಿನ, ಮಲ್ಹಾರಿ ಪೋಳ, ಗ್ರಾಪಂ ಸಿಬ್ಬಂದಿ, ಶಾಲೆಯ ಶಿಕ್ಷಕರು, ಇತರರು ಇದ್ದರು.