ಗೋಕಾಕ:ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನ್ಯಾಯವಾದಿ ಶಪೀ ಜಮಾದರ ನೇಮಕ
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನ್ಯಾಯವಾದಿ ಶಪೀ ಜಮಾದರ ನೇಮಕ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 10 :
ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೊರ್ಚಾದ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷರಾಗಿ ಗೋಕಾಕ ನಗರದ ನ್ಯಾಯವಾದಿ ಶಫೀ ಜಮಾದರ ಅವರನ್ನು ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ನಿಯುಕ್ತಿಗೊಳಿಸಿದ್ದಾರೆ.
ಇದರೊಂದಿಗೆ ಮಹಿಳಾ ಮೊರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕಿನ ಶ್ರೀಮತಿ ಜ್ಯೋತಿ ಕೋಲ್ಹಾರ ಮತ್ತು ಎಸ್.ಟಿ ಮೊರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಅರಬಾಂವಿಯ ಪರಶುರಾಮ ಗೋಡಿ ಅವರನ್ನು ನೇಮಿಸಲಾಗಿದೆ ಎಂದು ಬಿಜೆಪಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.