ಗೋಕಾಕ:ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಜು 11 :
ದೇಶ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಾಗೂ ಬೆಳಗಾವಿ ಜಿಲ್ಲೆಯ ಕೆಲವು ತಾಲೂಕಿನಲ್ಲಿ ಕರೊನಾ ಸೋಂಕು ಈಗ ದೃಢಪಟ್ಟಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ತ ಜನತೆ ತಪ್ಪದೇ ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.
ಶನಿವಾರದಂದು ಅವರು, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರಿಕಾ ಪ್ರತಿನಿಧಿಯೊಂದಿಗೆ ಮಾತನಾಡಿ, ಮಹಾಮಾರಿ ಕರೊನಾದಿಂದ ಜನತೆ ಭಯಬೀತರಾಗಬೇಡಿ, ಎಚ್ಚರಿಕೆಯಿಂದಿರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವದರ ಜೊತೆಗೆ ಪ್ರತಿಯೊಬ್ಬರೂ ತಪ್ಪದೇ ಮಾಸ್ಕ್ ಧರಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಬೆಳಗಾವಿ ಜಿಲ್ಲೆಯ ಸಮಸ್ತ ಸಾರ್ವಜನಿಕರಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಮನವಿ ಮಾಡಿಕೊಂಡಿದ್ದಾರೆ.