ಬೆಳಗಾವಿ:5 ತಾಲೂಕುಗಳಲ್ಲಿ ಜು 14 ರಿಂದ 7 ದಿನಗಳ ಲಾಕಡೌನ : ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ
5 ತಾಲೂಕುಗಳಲ್ಲಿ ಜು 14 ರಿಂದ 7 ದಿನಗಳ ಲಾಕಡೌನ : ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ, ಜುಲೈ 14 :
ಕರ್ನಾಟಕ-ಮಹಾರಾಷ್ಟ್ರ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಿರುವ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ.
ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಈ ಕುರಿತು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.
ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 5 ಗಂಟೆಯವರೆಗೆ 7 ದಿನಗಳ ಅವಧಿಯ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಲಾಕ್ ಡೌನ್ ಘೋಷಣೆ ಮಾಡಿರುವ 5 ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗಿದೆ. ಮರಣ ಪ್ರಮಾಣವು ಕೂಡಾ ಹೆಚ್ಚಳವಾಗಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.