ಗೋಕಾಕ:ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ಸಂಸದ ಈರಣ್ಣಾ ಕಡಾಡಿ ಮನವಿ
ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ : ಸಂಸದ ಈರಣ್ಣಾ ಕಡಾಡಿ ಮನವಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 :
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲೂ ಕೂಡಾ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಶನಿವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೊರೋನಾ ವೈರಸ್ ಇದು ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು ಈ ಸರಪಳಿಯನ್ನು ತುಂಡರಿಸಲು ಜಿಲ್ಲೆಯ 6 ತಾಲೂಕುಗಳಲ್ಲಿ ಜಿಲ್ಲಾಡಳಿತ ಲಾಕಡೌನ್ ಘೋಷಿಸಿದೆ, ಇದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅಗತ್ಯವಾಗಿದೆ. ಪೆಸ್ ಮಾಸ್ಕಗಳನ್ನು ಕಡ್ಡಾಯವಾಗಿ ಧರಿಸುವಂತಾಗಬೇಕು. ಕೈಗಳಿಗೆ ಸ್ಯಾನಿಟೈಸರ್ ಬಳಸಿ ಆಗಾಗ ಸೋಪಿನಿಂದ ಕೈಗಳನ್ನು ತೊಳೆಯಬೇಕು. 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡಲು ಗಮನಹರಿಸಬೇಕು. ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ನಿಲ್ಲಿಸಬೇಕು. ವಸ್ತು ಅಥವಾ ವ್ಯಕ್ತಿಗಳನ್ನು ಅನವಶ್ಯಕವಾಗಿ ಮುಟ್ಟಬಾರದು. ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕಷಾಯ ಮತ್ತು ಬಿಸಿ ನೀರು ಕುಡಿಯಬೇಕು ಎಂದು ಕಡಾಡಿ ಅವರು ತಿಳಿಸಿದ್ದಾರೆ.
60 ವರ್ಷ ಮೀರಿದ ಹಿರಿಯ ನಾಗರಿಕರು 10 ವರ್ಷಕ್ಕಿಂತ ಕೆಳಗಿನ ಚಿಕ್ಕ ಮಕ್ಕಳ ಬಗ್ಗೆ ವಿಶೇಷ ಕಾಳಜಿವಹಿಸಬೇಕು. ಕರೊನಾ ಲಕ್ಷಣಗಳು ಕಂಡುಬಂದಾಗ ನಿರ್ಲಕ್ಷಿಸದೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ನಿರ್ದೆಶನಗಳನ್ನು ಕಡ್ಡಾಯವಾಗಿ ಪಾಲಿಸಿ ಕೊರೋನಾ ಬಗ್ಗೆ ಭಯಪಡುವುದು ಬೇಡ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ವಹಿಸಿ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕರೊನಾ ವಿರುದ್ದ ಜಯಗಳಿಸಲು ಸಹಕರಿಸಬೇಕಾಗಿ ಬೆಳಗಾವಿ ಜಿಲ್ಲೆಯ ಜನತೆಯಲ್ಲಿ ನೂತನ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಮನವಿ ಮಾಡಿಕೊಂಡಿದ್ದಾರೆ.