ಗೋಕಾಕ:ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಚಿವರಿಂದ ಪುರಸ್ಕಾರ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಚಿವರಿಂದ ಪುರಸ್ಕಾರ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 21 :
ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದತ್ಯೆ ನೀಡಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಪ್ರಯೋಜನ ಪಡೆದು ಜಿಲ್ಲೆ, ರಾಜ್ಯ , ದೇಶದಾದ್ಯಂತ ಹೆಸರು ಮಾಡುವಂತೆ ಕರೆ ನೀಡಿದರು.
ಮಂಗಳವಾರದಂದು ನಗರದ ಸಚಿವರ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಹಾಗೂ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿ ಮಾತನಾಡುತ್ತಿದ್ದರು
ಇಂದಿನ ತಾಂತ್ರಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕ ಆರೋಗ್ಯಕರ ಸ್ವರ್ಧೆ ನಡೆಸಿ ತಮ್ಮ ಜೀವನವನ್ನು ಉಜ್ವಲಗೋಳಿಸಿಕೊಂಡು ಪಾಲಕರಿಗೆ ಕೀರ್ತಿ ತರಬೇಕೆಂದು ಹೇಳಿದರು
ಸತ್ಕಾರ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ಆರತಿ ಐದುಡ್ಡಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಸತ್ಕರಿಸುತ್ತಿರುವ ಸಚಿವರ ಕಾರ್ಯ ಮಾದರಿಯಾಗಿದ್ದು, ಈ ಪ್ರೋತ್ಸಾಹದಿಂದ ನಾವೆಲ್ಲಾ ಸಾಧಕರಾಗಿ ಜಿಲ್ಲೆಗೆ ಕೀರ್ತಿ ತರುತ್ತೆವೆಂದು ಹೇಳಿದರು
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರುಗಳಾದ ಟಿ.ಆರ್. ಕಾಗಲ್ , ಮಡೆಪ್ಪ ತೋಳಿನವರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಎಂ.ಕಾಬಂಳೆ , ಬಿಇಓ ಜಿ.ಬಿ.ಬಳಗಾರ ಉಪಸ್ಥಿತರಿದ್ದರು .