RNI NO. KARKAN/2006/27779|Friday, November 22, 2024
You are here: Home » breaking news » ಮೂಡಲಗಿ :ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೇವೆ ಅನನ್ಯ : ತಹಶೀಲ್ದಾರ ಮಹಾತ್

ಮೂಡಲಗಿ :ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೇವೆ ಅನನ್ಯ : ತಹಶೀಲ್ದಾರ ಮಹಾತ್ 

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೇವೆ ಅನನ್ಯ : ತಹಶೀಲ್ದಾರ ಮಹಾತ್

 

 

ನಮ್ಮ ಬೆಳಗಾವಿ ಇ – ವಾರ್ತೆ ,ಮೂಡಲಗಿ ಅ 6 :

 

ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂಜೆ ಸಲ್ಲಿಸಲಾಯಿತು. ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ ಡಿ.ಜೆ. ಮಹಾತ್, ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ, ಡಾ.ಭಾರತಿ ಕೋಣಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

ಹೆಚ್ಚುತ್ತಿರುವ ಕೊರೋನಾ ಸೊಂಕಿನ ಹಿನ್ನೆಲೆಯಲ್ಲಿ ಸೊಂಕಿತರ ಆರೈಕೆಗಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾಳಜಿಯು ನಮ್ಮ ನಾಡಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ ದಿಲ್‍ಶಾದ್ ಮಹಾತ್ ಶ್ಲಾಘಿಸಿದರು.
ಬುಧವಾರದಂದು ಕೊರೋನಾ ಸೊಂಕಿತರಿಗೆ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೋನಾ ಸೊಂಕಿತರಿಗೆ ತಮ್ಮ ಅನನ್ಯ ಸೇವೆ ನೀಡುವ ಮೂಲಕ ಅವರ ಪ್ರೀತಿಗೆ ಪಾತ್ರರಾಗಿದ್ದಾರೆಂದು ಹೇಳಿದರು.
ಹಿರಿಯ ತಜ್ಞ ವೈದ್ಯ ಹಾಗೂ ನಿವೃತ್ತ ಗೋಕಾಕ ತಾಲೂಕಾ ಆರೋಗ್ಯಾಧಿಕಾರಿ ಡಾ.ಆರ್.ಎಸ್. ಬೆಣಚಿನಮರಡಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ 40 ಹಾಸಿಗೆಗಳಿಗೆ ಅನುಕೂಲವಾಗಲು ಆಕ್ಸಿಜನ್ ಪೂರೈಸಲಾಗುತ್ತಿದೆ. ಈ ಮೂಲಕ ರೋಗಿಗಳಿಗೆ ಅನುಕೂಲವಾಗಲಿದೆ. ಅದರಲ್ಲೂ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಅಸ್ತಮಾ ಕಾಯಿಲೆ ಇರುವ ರೋಗಿಗಳಿಗೆ ಕೇಂದ್ರಿಯ ಆಮ್ಲಜನಕ ಅತ್ಯವಶ್ಯವಾಗಿದೆ. ಕೊರೋನಾ ನಂತರದ ದಿನಗಳಲ್ಲಿಯೂ ಬೇರೆ ಬೇರೆ ಕಾಯಿಲೆಗಳ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಇದು ಸಂಜೀವಿನಿಯಾಗಲಿದೆ. ಸರ್ಕಾರದಿಂದ ತ್ವರೀತಗತಿಯಲ್ಲಿ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಸಿಕೊಟ್ಟಿರುವ ಶಾಸಕರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಕೊಡಮಾಡಿರುವ ಪಿಪಿಇ ಕಿಟ್ ಹಾಗೂ ಎನ್-95 ಮಾಸ್ಕ್‍ಗಳನ್ನು ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ವಿತರಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ, ಗೋಕಾಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಮಹೇಶ ಕೋಣಿ, ಡಾ.ಉದಯ ಅಂಗಡಿ, ನಾಗನೂರ ಪಿಎಚ್‍ಸಿ ವೈದ್ಯಾಧಿಕಾರಿ ಡಾ.ಖನದಾಳಿ, ಮೂಡಲಗಿ ಪಿಎಸ್‍ಐ ಮಲ್ಲಿಕಾರ್ಜುನ ಸಿಂಧೂರ, ಎನ್‍ಎಸ್‍ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts: