ಚಿಕ್ಕೋಡಿ :ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ಜಾರಕಿಹೊಳಿ
ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಚಿವ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ ,ಚಿಕ್ಕೋಡಿ ಅ 8:
ಕೃಷ್ಣಾ ನದಿಯ ಪ್ರವಾಹ ಪರಿಸ್ಥಿತಿಯನ್ನು ಶನಿವಾರ ಜಿಲ್ಲಾ ಉಸ್ತುವಾರಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಬಳಿ ಭೇಟಿ ನೀಡಿದ ಸಚಿವರು ಬೋರ್ಟ್ ಮೂಲಕ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು, ಎನ್.ಡಿ.ಆರ್.ಎಫ್. ತಂಡ ಹಾಗೂ ಅಧಿಕಾರಿಗೊಳಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೃಷ್ಣಾ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಕೂಡಲೇ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜನತೆ ಸುರಕ್ಷಿತಾ ದೃಷ್ಟಿಯಿಂದ ಸ್ಥಳಗಳಿಗೆ ತೆರಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.