RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ

ಗೋಕಾಕ:ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ 

ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆಯ ವ್ಯವಸ್ಥೆಮಾಡಿ : ಜೆ.ಡಿ.ಎಸ್. ಮುಖಂಡ ಅಶೋಕ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 12:

 
ಕರೋನಾ ಸೋಂಕಿತರಿಗೆ ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಗುಣಮಟ್ಟದ ಚಿಕಿತ್ಸೆ ದೊರೆಯುವಂತಹ ವ್ಯವಸ್ಥೆಯಾದಾಗ ಮಾತ್ರ ಕರೋನಾ ರೋಗಕ್ಕೆ ನಿಯಂತ್ರ ಹೇರಲು ಸಾಧ್ಯವೆಂದು ಜೆ.ಡಿ.ಎಸ್. ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ಅವರು ಈಗಾಗಲೇ ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಹಬ್ಬುತ್ತಿರುವ ಕುರಿತು ಪ್ರಧಾನ ಮಂತ್ರಿಗಳು ಆತಂಕ ವ್ಯಕ್ತಪಡಿಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಸೂಚಿಸಿದ್ದಾರೆ. ಅದಕ್ಕೆ ಪೂರಕವಾಗಿ ಬೆಳಗಾವಿ ಜಿಲ್ಲೆ ಮತ್ತು ಗೋಕಾಕ ತಾಲೂಕಿನಲ್ಲಿಯೂ ಸಹ ಕರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಲ್ಲಿಯ ಕರೋನಾ ಸೋಂಕಿತರ ಸೂಕ್ತ ಚಿಕಿತ್ಸೆಗೆ ಜಿಲ್ಲಾಢಳಿತ ಮತ್ತು ತಾಲೂಕಾಡಳಿತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಗೋಕಾಕ ತಾಲೂಕಿನಲ್ಲಿ ಸರಕಾರ ನೀಡುತ್ತಿರುವ ಕರೋನಾ ಸೋಂಕಿತರ ಮತ್ತು ರೋಗದಿಂದ ಮೃತ ಮಟ್ಟವರ ಸಂಖ್ಯೆಯು ವಾಸ್ತವತೆಯನ್ನು ಹೊಂದಿಲ್ಲ. ಅತ್ಯಂತ ಸರಳವಾಗಿ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಹೆದರಿಕೆಯಿಂದ ಸೋಂಕಿತರು ಮನೆಯಲ್ಲಿಯೇ ಇದ್ದು ಚಿಕಿತ್ಸೆಯಿಂದ ವಂಚಿತರಾಗಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ಕರೋನಾ ಸೋಂಕಿತರ ಚಿಕಿತ್ಸೆಗೆ ಇರುವ ಬೆಡ್‍ಗಳ ಕೋರತೆ ಹಾಗೂ ಬಹುತೇಕ ಖಾಸಗಿ ಆಸ್ಪತ್ರೆಗಳು ಕರೋನಾ ಸೋಂಕಿತರ ಚಿಕಿತ್ಸೆಗೆ ಹಿಂದೇಟು ಹಾಕುತ್ತಿರುವದು ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅವರು ಖೇಧ ವ್ಯಕ್ತಪಡಿಸಿದ್ದಾರೆ.
ಕೆಲ ಖಾಸಗಿ ಆಸ್ಪತ್ರೆಗಳ ವೈದ್ಯರುಗಳು ಕರೋನಾ ರೋಗಿಗಳ ಚಿಕಿತ್ಸೆಗೆ ಮುಂದಾಗುವ ಮನಸ್ಥಿತಿ ಹೊಂದಿದ್ದರೂ ಸಹ ತಮ್ಮದೇ ಆದ ಅನಿವಾರ್ಯ ಸಮಸ್ಯೆಗಳನ್ನು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ತಾಲೂಕಿನವರೆಯಾದ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಜಿಲ್ಲಾ ಮತ್ತು ತಾಲೂಕಿನ ಹಿರಿಯ ಅಧಿಕಾರಿಗಳೊಂದಿಗೆ ನಗರದ ಹಾಗೂ ತಾಲೂಕಿನ ಖಾಸಗಿ ವೈದ್ಯರುಗಳ ಸಭೆಯನ್ನು ನಡೆಸಿ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿಕೊಡುವ ಮೂಲಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೂಡಲೇ ಕರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಸೂಕ್ತ ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಂಡಾಗ ಮಾತ್ರ ನಗರ ಮತ್ತು ತಾಲೂಕಿನಲ್ಲಿ ಕರೋನಾ ಸೋಂಕಿತರಿಗೆ ವಿಶ್ವಾಸ ಮತ್ತು ದೈರ್ಯ ತುಂಬುವಂತಾಗುತ್ತಿದ್ದು, ಆಗಲೇ ಮಾತ್ರ ನಗರ ಮತ್ತು ತಾಲೂಕಿನಲ್ಲಿ ಕರೋನಾ ಸೋಂಕಿಗೆ ಹಾಗೂ ಸೋಂಕಿತರ ಸಾವಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಜಿಲ್ಲಾ ಮತ್ತು ತಾಲೂಕಾ ಆಡಳಿತವನ್ನು ಒತ್ತಾಯಿಸಿದ್ದಾರೆ.

Related posts: