RNI NO. KARKAN/2006/27779|Wednesday, November 6, 2024
You are here: Home » breaking news » ಬೆಳಗಾವಿ:ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಧ್ವಜಾರೋಹಣ

ಬೆಳಗಾವಿ:ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಧ್ವಜಾರೋಹಣ 

ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಧ್ವಜಾರೋಹಣ

ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಅ 15 :

ಉತ್ತರ ಕರ್ನಾಟಕ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ಕಳಸ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಹಾಗೆಯೇ ಈ ಯೋಜನೆ ಜಾರಿಗೆ ಅನುವಾಗುವಂತೆ ರಾಜ್ಯ ಸಚಿವ ಸಂಪುಟ ಸಹ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಧ್ವಜಾರೋಹಣ ನೇರವೇರಿಸಿದ ಬಳಿಕ ಮಾತನಾಡಿದ ಅವರು, ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಿ ಗೋಕಾಕ್ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಘಟ್ಟಿ ಬಸವಣ್ಣ ಯೋಜನೆಯನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ನೀರಾವರಿ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಚಚಡಿ ಏತ ನೀರಾವರಿ ಯೋಜನೆ, ಮುರುಗೋಡ ಏತ ನೀರಾವರಿ ಯೋಜನೆ, ವೆಂಕಟೇಶ್ವರ ಏತ ನೀರಾವರಿ ಯೋಜನೆ, ವೀರಭದ್ರೇಶ್ವರ ಏತ ನೀರಾವರಿ ಯೋಜನೆ, ಕೆಂಪವಾಡದ ಬಸವೇಶ್ವರ ಏತ ನೀರಾವರಿ ಯೋಜನೆ, ಗೊಡಚಿನಮಲ್ಕಿ ಏತ ನೀರಾವರಿ ಯೋಜನೆ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಅಥಣಿ ತಾಲ್ಲೂಕಿನ ರೈತರ ಅನುಕೂಲಕ್ಕಾಗಿ ಕೊಟ್ಟಲಗಿ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಎಲ್ಲಾ ಯೋಜನೆಗಳ ಮುಕ್ತಾಯಕ್ಕೆ ಕಾಲಮಿತಿ ಸೂಚಿಸಿದ್ದು, ಶೀಘ್ರವೇ ಈ ಯೋಜನೆಗಳು ಜನಸಾಮಾನ್ಯರನ್ನು ತಲುಪಲಿದೆ ಎಂದರು.
ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳೂ ಸಹ ಪ್ರಗತಿಯಲ್ಲಿವೆ.
ಬೆಳಗಾವಿ ಜಿಲ್ಲೆಯ ರಾಯಬಾಗ, ಕುಡಚಿ, ಕಿತ್ತೂರು, ಬೈಲಹೊಂಗಲ, ಚಿಕ್ಕೋಡಿ, ಅಥಣಿ ಮತ್ತು ಹುಕ್ಕೇರಿ ತಾಲ್ಲೂಕುಗಳಲ್ಲಿನ ಒಟ್ಟು 137 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಹುಬ್ಬಳ್ಳಿಯಲ್ಲಿ ಈಚೆಗೆ ಜರುಗಿದ ರಾಜ್ಯ ಮಟ್ಟದ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯ  10 ಜನ ಉದ್ದಿಮೆದಾರರು ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಎರಡು ಏಕಗವಾಕ್ಷಿ ಸಮಿತಿ ಮುಖಾಂತರ 18   ಯೋಜನೆಗಳಿಗೆ ಅನುಮೋದನೆ ನೀಡಿದ್ದು, ರೂ.160 ಕೋಟಿ ಬಂಡವಾಳ ಹೂಡಿಕೆ ಹಾಗೂ 537 ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯು ಸಹಕಾರ ಜಿಲ್ಲೆಯಾಗಿದ್ದು ರಾಜ್ಯದಲ್ಲಿ ಸಹಕಾರ ಚಳುವಳಿಯಲ್ಲಿ ಬೆಳಗಾವಿ ಜಿಲ್ಲೆ ಮುಂಚೂಣಿಯಲ್ಲಿದೆ. ರೈತರ ಸಾಲಮನ್ನಾ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯ ಒಟ್ಟು 2  ಲಕ್ಷ 87   ಸಾವಿರ ರೈತರ ಸಾಲ ರೂ. 1167  ಕೋಟಿ ಮನ್ನಾ ಆಗುವ ಬಗ್ಗೆ ಅಂದಾಜಿಸಲಾಗಿದೆ. ಈವರೆಗೆ ಜಿಲ್ಲೆಯ 759441  ರೈತರ ರೂ.1017.94  ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ 2029-20  ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆಹಾನಿಯಾದ 1.32   ಲಕ್ಷ ರೈತರಿಗೆ ಒಟ್ಟು 217 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ.
ಅದೇ ರೀತಿ ಪ್ರವಾಹದಲ್ಲಿ ಹಾನಿಗೊಳಗಾದ ಜಿಲ್ಲೆಯ ಒಟ್ಟು 44, 156  ಮನೆಗಳ ಮಾಲೀಕರಿಗೆ ೪೮೮.೭೪ ಕೋಟಿ ರೂಪಾಯಿ ಪರಿಹಾರವನ್ನು ಇದುವರೆಗೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಐಜಿಪಿ ರಾಘವೇಂದ್ರ ಸುಹಾಸ್, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

Related posts: