ಗೋಕಾಕ:ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡು-ಹೆಣ್ಣಿಗೆ ಸಮಾನ ಕೂಲಿ : ಪಿಡಿಒ ಬಾವಿಕಟ್ಟಿ
ಉದ್ಯೋಗ ಖಾತರಿ ಯೋಜನೆಯಲ್ಲಿ ಗಂಡು-ಹೆಣ್ಣಿಗೆ ಸಮಾನ ಕೂಲಿ : ಪಿಡಿಒ ಬಾವಿಕಟ್ಟಿ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಅ 19 :
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಗ್ರಾಮದ ವ್ಯಾಪ್ತಿಯಲ್ಲಿರುವ ಕಾಲುವೆ ಹೂಳೆತ್ತುವ ಕೆಲಸ ನಡೆದ ಸ್ಥಳಕ್ಕೆ ಮಂಗಳವಾರ ಆ.19ರಂದು ಭೇಟಿ ನೀಡಿ, ಕಾಮಗಾರಿ ವಿಕ್ಷೀಸಿ ಮಾತನಾಡಿ, ಸ್ಥಳೀಯರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದÀರು.
ಸ್ಥಳೀಯ ಗ್ರಾಪಂ ಡಿಇಒ ವಿಠಲ ಚಂದರಗಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ಕೂಲಿಕಾರರಿಗೆ, ರೈತರಿಗೆ ದೊರಕುವ ಸೌಲಭ್ಯಗಳ ಕುರಿತು ರೈತರಿಗೆ, ಕೂಲಿ ಕಾರ್ಮಿಕರಿಗೆ, ಗ್ರಾಮಸ್ಥರಿಗೆ ತಿಳಿಸಿದರು. ಗ್ರಾಮದ ವ್ಯಾಪ್ತಿಯಲ್ಲಿರುವ ಕಾಲುವೆ ಹೂಳೆತ್ತುವ ಕೆಲಸದ ಕುರಿತು ಪಿಡಿಒ ಎಚ್.ಎನ್.ಬಾವಿಕಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸುರೇಶ ಬಾಣಸಿ, ವಿಠಲ ಚಂದರಗಿ, ಮಂಜುನಾಥ ಕಂಬಿ, ಅಡಿವೇಶ ಮುಧೋಳ, ಮಹಾನಿಂಗ ಕುರಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಕೂಲಿ ಕಾರ್ಮಿಕರು ಇದ್ದರು.