RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಕ್ಕೆ ಚಾಲನೆ

ಗೋಕಾಕ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಕ್ಕೆ ಚಾಲನೆ 

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಕ್ಕೆ ಚಾಲನೆ
ಗೋಕಾಕ ಸೆ 1 : ಅರಭಾವಿ ದುರದುಂಡೇಶ್ವರ ಮಠದ ಆಶೀರ್ವಾದದಿಂದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಗತಿಪಥದತ್ತ ಸಾಗುತ್ತಿದ್ದು, ರೈತರ ಏಳ್ಗೆಗೆ ಸ್ಪಂದಿಸುತ್ತಿರುವುದು ಪ್ರಶಂಸನೀಯ ಎಂದು ಅರಭಾವಿಯ ಸಿದ್ಧಲಿಂಗ ಮಹಾಸ್ವಾಮಿಗಳು ಶ್ಲಾಘಿಸಿದರು.

ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು, ರೈತರ ಆರ್ಥಿಕಾಭಿವೃದ್ಧಿಯಲ್ಲಿ ಸಕ್ಕರೆ ಕಾರ್ಖಾನೆಯ ಪಾತ್ರ ಹಿರಿದಾಗಿದೆ. ಸಹಕಾರಿ ತತ್ವದ ಆಧಾರದ ಮೇಲೆ ಸ್ಥಾಪಿತಗೊಂಡಿರುವ ಈ ಕಾರ್ಖಾನೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆಯಾಗಿದೆ. ಇದಕ್ಕೆ ರೈತರು ನೀಡುತ್ತಿರುವ ಸಹಕಾರವೇ ಕಾರಣವೆಂದು ಹೇಳಿದರು.

ಪ್ರಸಕ್ತ ಹಂಗಾಮಿನಲ್ಲಿ ಈ ಕಾರ್ಖಾನೆಗೆ ಕಬ್ಬನ್ನು ಪೂರೈಕೆ ಮಾಡಿ ಕಾರ್ಖಾನೆಯ ಅಭಿವೃದ್ಧಿಗೆ ಸಹಕರಿಸಬೇಕು. ಇದು ನಮ್ಮ ಕಾರ್ಖಾನೆ ಎಂಬ ಅಭಿಮಾನ ರೂಢಿಸಿಕೊಂಡು ಕಾರ್ಖಾನೆಯ ಪ್ರಗತಿಪಥಕ್ಕೆ ಕಾರಣೀಕರ್ತರಾಗಬೇಕೆಂದರು.

ಅಧ್ಯಕ್ಷತೆಯನ್ನು ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ ವಹಿಸಿದ್ದರು. ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡುವ ರೈತರನ್ನು ಅಭಿನಂದಿಸಿ ಅವರಿಗೆ ಬಹುಮಾನ ನೀಡುವುದಾಗಿ ತಿಳಿಸಿದರು.

ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ನಿರ್ದೇಶಕರಾದ ಕೆಂಚಗೌಡ ಪಾಟೀಲ, ಬಸಗೌಡ ಪಾಟೀಲ, ಕೃಷ್ಣಪ್ಪಾ ಬಂಡ್ರೊಳ್ಳಿ, ಲಕ್ಷ್ಮಣ ಗಣಪ್ಪಗೋಳ, ಗಿರೆಪ್ಪ ಹಳ್ಳೂರ, ರಾಮಪ್ಪಾ ಬಂಡಿ, ಶಿವಲಿಂಗ ಪೂಜೇರಿ, ಮಲ್ಲಿಕಾರ್ಜುನ ಕಬ್ಬೂರ, ಯಲ್ಲವ್ವಾ ಸಾರಾಪೂರ, ಲಕ್ಕವ್ವಾ ಬೆಳಗಲಿ, ಗೋಕಾಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಹಾಗೂ ಗಣ್ಯ ವರ್ತಕ ಬಸವರಾಜ ಕಲ್ಯಾಣಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಎಸ್.ಎಸ್. ರಂಜನಗಿ, ಕಬ್ಬು ಅಭಿವೃದ್ಧಿ ಅಧಿಕಾರಿ ಜೆ.ಆರ್. ಬಬಲೇಶ್ವರ, ಮುಂತಾದವರು ಉಪಸ್ಥಿತರಿದ್ದರು.

Related posts: