ಗೋಕಾಕ:ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ
ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಸೆ 5 :
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶನಿವಾರದಂದು ಶಿಕ್ಷಕರ ದಿನಾಚರಣೆಯನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಯಿತು.
ಬೆಟಗೇರಿ ವಲಯದ ಸಿಆರ್‍ಪಿ ಬಿ.ಟಿ.ಪುಂಜಿ ಅವರು ಡಾ.ಎಸ್.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಣೆ ನಡೆಯಿತು. ಕನ್ನಡ ಹೆಣ್ಣು ಮಕ್ಕಳ ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮಾತನಾಡಿ, ಶಿಕ್ಷಕರ ಸೇವಾ ವೃತ್ತಿಯು ಅತ್ಯಂತ ಶ್ರೇಷ್ಠವಾಗಿದೆ. ಗುರು ಮತ್ತು ಶಿಷ್ಯರ ನಡುವಿನ ಅವಿನಾಭಾವ ಸಂಬಂಧ ಇಂದು ಕಣ್ಮರೆಯಾಗುತ್ತಿದೆ ಎಂದರು.
ಶಾಲೆಯ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ಎಸ್.ವೈ.ಸನದಿ, ಕನ್ನಡ ಗಂಡು ಮಕ್ಕಳ ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ಉದ್ದಪ್ಪ ಚಂದರಗಿ ಸೇರಿದಂತೆ ಉಭಯ ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಮದ್ಯಾಹ್ನ ಬಿಸಿಯೂಟ ಅಡುಗೆ ಸಿಬ್ಬಂದಿ, ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು ಇದ್ದರು.