ಗೋಕಾಕ:ಗೋಕಾಕ ವಲಯದ ಇಬ್ಬರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಗೋಕಾಕ ವಲಯದ ಇಬ್ಬರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 8 :
ಗೋಕಾಕ ಶೈಕ್ಷಣಿಕ ವಲಯದ ಕೈತನಾಳ ಮತ್ತು ಮಾಲದಿನ್ನಿ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಈ ಬಾರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಸೆಪ್ಟೆಂಬರ್ 5 ಶಿಕ್ಷಕ ದಿನಾಚರಣೆ ನಿಮಿತ್ತ ಚಿಕ್ಕೋಡಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕೈತನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಯಲ್ಲಪ್ಪ ಸಣ್ಣಲಗಮನ್ನವರ ಹಾಗೂ ಮಾಲದಿನ್ನಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂತೋಷಕುಮಾರ ಮುರಗೋಡ ಅವರಿಗೆ ಶಾಸಕ ಗಣೇಶ ಹುಕ್ಕೇರಿ , ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಪ್ರಶಸ್ತಿ ನೀಡಿ ಗೌರವಿಸಿದರು
ಈ ಸಂದರ್ಭದಲ್ಲಿ ಡಿಡಿಪಿಐ ಗಜಾನನ ಮನ್ನಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು
ಗೋಕಾಕ ವಲಯದ ಇಬ್ಬರು ಶಿಕ್ಷಕರು ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪಡೆದ ನಿಮಿತ್ತ ಶಿಕ್ಷಣಾಧಿಕಾರಿ ಜಿ.ಬಿ ಬಳಗಾರ , ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ ಪಾಟೀಲ, ಮುಖ್ಯೋಪಾಧ್ಯಾಯ ಗೋಪಾಲ ಮಾಳಗಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.