ಗೋಕಾಕ:ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ
ಭಾರತೀಯ ಜನತಾ ಪಾರ್ಟಿ ವತಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 15 :
ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ, ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು.
ನಗರದ ನಾಕಾ ನಂ-1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಕಸಗುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಗರದ ವಿವಿಧ ವಾರ್ಡ, ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ ಹುಣಶ್ಯಾಳ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಾಜಿ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ, ನಗರಸಭೆ ಸದಸ್ಯರಾದ ಸಿದ್ದಪ್ಪ ಹುಚ್ಚರಾಮಪ್ಪಗೋಳ, ಬಸವರಾಜ ಆರೇನ್ನವರ, ಶಿವಪ್ಪ ಗುಡ್ಡಾಕಾಯು, ಯಲ್ಲಪ್ಪ ಹಳ್ಳೂರ, ಮುತ್ತುರಾಜ ಜಮಖಂಡಿ, ಮಾರುತಿ ಜಿಂಗಿ, ಸಚೀನ ಕಮಟೇಕರ, ಬಿಜೆಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.