ಗೋಕಾಕ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಸೆ 17 :
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಗುರುವಾರದಂದು ದೇವಶಿಲ್ಪಿ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸರಳ ಹಾಗೂ ಸಾಂಕೇತಿಕವಾಗಿ ನಡೆಯಿತು.
ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ಆರ್.ಬಿ.ಬೆಟಗೇರಿ ಅವರು ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಬೆಟಗೇರಿ ಸಿಆರ್‍ಸಿ ವಲಯದ ಸಿಆರ್‍ಪಿ ಬಿ.ಟಿ.ಪುಂಜಿ, ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ, ಎಸ್.ವೈ.ಸನದಿ, ಉಭಯ ಶಾಲೆಯ ಶಿಕ್ಷಕರು, ಎಸ್‍ಡಿಎಮ್‍ಸಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ವಿಶ್ವಕರ್ಮ ಸಮುದಾಯದ ಹಿರಿಯ ನಾಗರಿಕರು, ಗ್ರಾಮಸ್ಥರು ಇದ್ದರು.