RNI NO. KARKAN/2006/27779|Tuesday, November 5, 2024
You are here: Home » breaking news » ಗೋಕಾಕ:ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಮನವಿ

ಗೋಕಾಕ:ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಮನವಿ 

ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಮನವಿ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 19 :

 

 

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅರಭಾವಿ ಮತಕ್ಷೇತ್ರದ ಭೋವಿವಡ್ಡರ ಸಮಾಜದ ವತಿಯಿಂದ ಮನವಿ ಸಲ್ಲಿಸಲಾಯಿತು.
ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗ್ರಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರಿಗೆ ಮನವಿ ಸಲ್ಲಿಸಿದರು.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಯಿಲ್ಲದೆ ಏಕಪಕ್ಷಿಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದು. ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಪರಿಶಿಷ್ಟ ಜಾತಿಯ 101 ಸಮುದಾಯಗಳಿಗೆ ಮತ್ತು ಆಸಕ್ತರಿಗೆ ಸಂಘ ಸಂಸ್ಥೆಗಳಿಗೆ ಈ ವರದಿಯ ದೃಢಿಕೃತ ಪ್ರತಿಯನ್ನು ನೀಡಬೇಕು.ಆಕ್ಷೇಪಣೆ ತಕರಾರು ಮತ್ತು ನ್ಯಾಯ ಸಮ್ಮತ ತಿದ್ದುಪಡೆಗಳನ್ನು ಸೂಚಿಸಲು ಕಾಲಾವಕಾಶ ನೀಡಬೇಕು. ಎಸ್.ಸಿ.ಎಸ್.ಟಿ ಪಂಗಡಗಳ ಮಿಸಲಾತಿ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿರುವ ನ್ಯಾ.ನಾಗಮೋಹನದಾಸ ಅವರ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಬೇಕು.ರಾಜ್ಯದ ಎಲ್ಲ ಜಾತಿ, ಜನಾಂಗ, ಬುಡಕಟ್ಟುಗಳವಾಸ್ತವ ಸ್ಥಿತಿಗತಿಗಳನ್ನು ಅರಿಯುವಂತಾಗಲು ಹಿಂದಿನ ಸರ್ಕಾರತಯಾರಿಸುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ತಾವುಗಳು ವಿಧಾನಸಭೆ ಅಧಿವೇಶನದಲ್ಲಿ ಮತ್ತು ಸರ್ಕಾರದ ಮೇಲೆ ಒತ್ತಡವನ್ನು ತಂಡು 99 ಸಮುದಾಯಗಳ ಹಿತಕಾಪಾಡಲುಶ್ರಮಿಸಬೇಕು.
ರಾಜ್ಯದ ಎಸ್‍ಸಿ, ಎಸ್‍ಟಿ ಜಾತಿಯ ಐಕ್ಯತೆ ಉಳಿಸಿಕೊಳ್ಳುವುದು ಒಕ್ಕೂಟದ ಉದ್ದೇಶವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಲು ಸರ್ಕಾರಪಾರದರ್ಶಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಆಶಿಸುತ್ತೇವೆ.ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕಲು ಯತ್ನಿಸುತ್ತಿವೆ. ಲಂಬಾಣಿ, ಭೋವಿ, ಕೊರಚ, ಕೊರಮ ಜಾತಿಗಳನ್ನು ಎಸ್ ಸಿ ಪಟ್ಟಿಯಿಂದ ತೆಗೆದು ಹಾಕಬೇಕೆಂಬಅನಗತ್ಯ ಚರ್ಚೆಯನ್ನು ಹುಟ್ಟು ಹಾಕಲಾಗಿದೆ. ವರ್ಗೀಕರಣ,ಕೆನೆಪದರ ಮತ್ತಿತರವಿಚಾರಗಳನ್ನು ಹರಿಬಿಟ್ಟು ನಮ್ಮ ಐಕ್ಯತೆಯನ್ನು ಚಿದಗೊಳಿಸಿ ಹೋರಾಟಗಳನ್ನು ಹತ್ತಿಕ್ಕುವ ದುರುದ್ದೇಶದಿಂದಾಗಿಕೆಲವರು ಪರಿಶಿಷ್ಟರನ್ನು ಒಡೆದು ಆಳಲು ಪ್ರಯತ್ನಿಸುತ್ತಿದ್ದಾರೆ. ಪರಿಶಿಷ್ಟರ ಜಾತಿಯಲ್ಲಿರುವ ನಮ್ಮ ಸಮುದಾಯಗಳ ಭಾವನೆಗೆ ಧಕ್ಕೆ ಆಗುತ್ತಿರುವುದನ್ನು ತಡೆದು ನಮ್ಮ ಪರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜ ಮುಖಂಡರುಗಳಾದ ರಾಯಪ್ಪ ಬಂಡಿವಡ್ಡರ, ಕೃಷ್ಣಾ ಬಂಡಿವಡ್ಡರ,ಮೋಹನ ಬಂಡಿವಡ್ಡರ, ಸುನೀಲ ಜಮಖಂಡಿ, ಶಿದ್ರಾಮ ಬಂಡಿವಡ್ಡರ,ಅಶೋಕ ಬಂಡಿವಡ್ಡರ,ವಿಲಾಸ ಗಾಡಿವಡ್ಡರ, ಅಶೋಕ ಬಂಡಿವಡ್ಡರ,ಭೀಮಶಿ ಬಂಡಿವಡ್ಡರ,ಪರುಶರಾಮ ಬಂಡಿವಡ್ಡರ ಸೇರಿದಂತೆ ಭೋವಿ ವಡ್ಡರ ಸಮಾಜದ ಬಾಂಧವರು ಇದ್ದರು.

Related posts: