ಬೆಳಗಾವಿ:ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬೆಳಗಾವಿಯಲ್ಲಿ ಮುಂದುವರೆದ ಪ್ರತಿಭಟನೆ : ಪಕ್ಷದಿಂದ ವಜಾಕ್ಕೆ ವಾಟಾಳ್ ಆಗ್ರಹ
ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಬೆಳಗಾವಿಯಲ್ಲಿ ಮುಂದುವರೆದ ಪ್ರತಿಭಟನೆ : ಪಕ್ಷದಿಂದ ವಜಾಕ್ಕೆ ವಾಟಾಳ್ ಆಗ್ರಹ
ಬೆಳಗಾವಿ ಸೆ 2: ನಾಡ ವಿರೋಧಿ ಹೇಳಿಕೆ ನೀಡಿದ ರಾಜ್ಯ ಕಾಂಗ್ರೆಸ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು
ನಗರದ ಚನ್ನಮ್ಮ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಮಲಗುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡಿದರು. ನಂತರ ಮಾತನಾಡಿದ ವಾಟಾಳ್ ನಾಗರಾಜ್ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗಡಿಪಾರು ಮಾಡಬೇಕು. ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದು ಹಾಕಬೇಕು ಈ ಸಂಬಂಧ ಹೆಸರು ತೆಗೆದು ಹಾಕುವಂತೆ ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ಸಲ್ಲಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮೀ ಹೇಬ್ಬಾಳ್ಕರ್ ಅವರನ್ನು ವಜಾ ಮಾಡಬೇಕು. ಮಾಡದೆ ಹೋದರೆ ರಾಜೀನಾಮೆ ನೀಡವವರೆಗೂ ಹೋರಾಟ ಮುಂದುವರೆಸಲಾಗುವುದು.
ಅಲ್ಲದೆ, ಅತೀ ಶೀಘ್ರದಲ್ಲಿ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆ ವಾಟಾಳ್ ನಾಗರಾಜ್. ಸಾ.ರಾ ಗೋವಿಂದ್, ಕುಮಾರ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಸದಸ್ಯರನ್ನು ಬೆಳಗಾವಿ ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು