ಗೋಕಾಕ :ಗಾನ ಗಂಧರ್ವ ಎಸ್.ಪಿ.ಬಿ ನಿಧನ ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಮುರುಘರಾಜೇಂದ್ರ ಶ್ರೀ
ಗಾನ ಗಂಧರ್ವ ಎಸ್.ಪಿ.ಬಿ ನಿಧನ ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ : ಮುರುಘರಾಜೇಂದ್ರ ಶ್ರೀ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 25 :
ಆಗಸ್ಟ್ 5ರಿಂದ ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದು ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಕಾರಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲವಾಗಿದ್ದಾರೆ ಎಂಬ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಇವರ ಅಗಲಿಕೆಯಿಂದ ಸಂಗೀತ ಲೋಕ ಬಡವಾಗಿದೆ. ಸರಳ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸಾಧನೆಯನ್ನು ಗುರುತಿಸಿ ಕಳೆದ ವರ್ಷ ಶ್ರೀ ಮಠದಿಂದ ಕಾಯಕಶ್ರೀ ಪ್ರಶಸ್ತಿ ನೀಡಿ ಅವರಿಗೆ ಗೌರವಿಸಲಾಗಿತ್ತು , ತುಂಬಾ ಮೃದು ಸ್ವಭಾವ ಹೊಂದಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರ್ತಿಸಿಕೊಂಡಿದ್ದಂತ ಮೇರು ಗಾಯಕ. ಇಂತಹ ಗಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ. ಆದರೆ ಅವರ ಸಾಧನೆ, ಹಾಡಿದ ಹಾಡುಗಳ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಇಂತಹ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಜೀವನ ನಮ್ಮೆಲ್ಲರಿಗೆ ಮಾದರಿಯಾಗಿದೆ. ಎಸ್.ಪಿ.ಬಿ ಅವರಿಗೆ ದೇಶ ಅವರಿಗೆ ಪ್ರೀತಿಯಿಂದ ಬಾಲು ಎಂದು ಕರೆಯುತ್ತಿತ್ತು . ಅಂತಹ ಮಹಾನ ಗಾಯಕ ಬಾಲು ಇಂದು ನಮ್ಮನ್ನು ಬಿಟ್ಟು ಅಗಲಿದ್ದಾರೆ ಅವರ ಆತ್ಮಕ್ಕೆ ಭಗವಂತನ ಶಾಂತಿಯನ್ನು ದಯಪಾಲಿಸಿ , ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮುರಘರಾಜೇಂದ್ರ ಮಹಾಸ್ವಾಮಿಗಳು ಶೋಕ ವ್ಯಕ್ತಪಡಿಸಿದ್ದಾರೆ.