RNI NO. KARKAN/2006/27779|Tuesday, December 24, 2024
You are here: Home » breaking news » ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ 

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :


ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು.
ಅರಭಾಂವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಗಾಂಧಿಜೀ ಅವರು ಸ್ವತಂತ್ರ ಸಂಗ್ರಾಮದಲ್ಲಿ ಅವಿರತವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಗಾಂಧಿಜೀ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ನಾವೆಲ್ಲರೂ ಪರಿಪಾಲನೆ ಮಾಡಬೇಕಿದೆ. ಭಾರತ ಕಂಡ ಶ್ರೇಷ್ಠ ಪ್ರಧಾನಿಗಳಲ್ಲಿ ಲಾಲಬಹಾದ್ದೂರ ಶಾಸ್ತ್ರಿ ಒಬ್ಬರಾಗಿದ್ದರು. ದಕ್ಷತೆ, ಪಾರದರ್ಶಕತೆಗೆ ಹೆಸರುವಾಸಿಯಾಗಿದ್ದರೆಂದು ಹೇಳಿದರು.
ಈ ಸಂದರ್ಭದಲ್ಲಿ ಎನ್‍ಎಸ್‍ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಬೆಳಗಾವಿ ಮಹಾನಗರ ಘಟಕದ ಉಪಾಧ್ಯಕ್ಷೆ ಮಹಾದೇವಿ ಹಿರೇಮಠ, ಅರಭಾಂವಿ ಮಂಡಲ ಎಸ್‍ಟಿ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ್ ಸರ್ಕಾವಸ್, ಓಬಿಸಿ ಮೋರ್ಚಾ ಅಧ್ಯಕ್ಷ ಸಂಗಪ್ಪ ಕಂಟಿಕಾರ, ಮಂಗಳಾ ಕೌಜಲಗಿ, ಕಮಲಾವತಿ ಬಡಗಾಂವಿ, ಬಿಜೆಪಿ ಪದಾಧಿಕಾರಿಗಳು ಇದ್ದರು.

Related posts: