ಗೋಕಾಕ:ಕೋರೋನಾ ವೈರಸ್ಸ ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ : ವಿಜಯಕುಮಾರ ಎಮ್.ಎ
ಕೋರೋನಾ ವೈರಸ್ಸ ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ : ವಿಜಯಕುಮಾರ ಎಮ್.ಎ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 14 :
ಮಹಾಮಾರಿ ಕೋರೋನಾ ವೈರಸ್ಸನ್ನು ನಿಯಂತ್ರಿಸಲು ಜನತೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಇಲ್ಲಿಯ 12ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಮ್.ಎ. ಹೇಳಿದರು.
ಬುಧವಾರದಂದು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‍ಎಲ್‍ಜೆ ಕಾನೂನು ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೋವಿಡ್-19ರ ಕುರಿತು ಜನಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕೋವಿಡ್ ನಿಯಂತ್ರಿಸಲು ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡುತ್ತಿದ್ದರು.
ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯವನ್ನು ದೇಶ ಸೇವೆಯೆಂದು ತಿಳಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಕೋರೋನಾ ವೈರಸ್ಸನ್ನು ನಿಯಂತ್ರಿಸಲು ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸತೀಶ ಬಾಳಿ, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಆರ್.ಚಂದ್ರಪ್ಪ ಹೊನ್ನೂರ, ನ್ಯಾಯವಾದಿ ಸಂಘದ ಅಧ್ಯಕ್ಷ ಯು.ಬಿ.ಶಿಂಪಿ, ಬಿಇಓ ಜಿ.ಬಿ.ಬಳಗಾರ, ಆರೋಗ್ಯ ಇಲಾಖೆಯ ಡಾ.ಜ್ಯೋತಿಲಕ್ಷ್ಮೀ ಅಂಗಡಿ, ಮಲ್ಲವ್ವ ನಾಯಿಕ, ಎಸ್‍ಎಲ್‍ಜೆ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರತಿಭಾ ಮೊರೆ ಸೇರಿದಂತೆ ಅನೇಕರು ಇದ್ದರು.