ಗೋಕಾಕ:ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ : ಕೈ ಬಂದ ತುತ್ತು ಬಾಯಿಗೆ ಬರಲಿಲ್ಲ
ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ : ಕೈ ಬಂದ ತುತ್ತು ಬಾಯಿಗೆ ಬರಲಿಲ್ಲ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ (ಅ.15):
ಮೊನ್ನೇ ಅಷ್ಟೇ ಪ್ರಕಟವಾಗಿದ್ದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇದರಿಂದ ಅಧ್ಯಕ್ಷ – ಉಪಾಧ್ಯಕ್ಷ ಆಗಲು ತೂದಿಗಾಲಲ್ಲಿ ನಿಂತದ್ದ ಅಭ್ಯರ್ಥಿಗಳಿಗೆ ಭಾರಿ ನಿರಾಶೆ ಉಂಟಾಗಿದ್ದು, ಪ್ರಕರಣ ಇತ್ಯರ್ಥಗೊಂಡು ಸರಕಾರ ಮತ್ತೆ ಮಿಸಲಾತಿ ಪ್ರಕಟಿಸುವವರೆಗೆ ರಾಜಕೀಯ ಚಟುವಟಿಕೆಗಳು ಗೂಡು ಸೇರಲ್ಲಿದ್ದು, ನಗರಸಭೆ ಸದಸ್ಯರ ಸದ್ಯದ ಪರಿಸ್ಥಿತಿ ಕೈಗೆ ಬಂದು ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ ಎಂದು ಜನ ಮಾತನಡ ತೊಡಗಿದ್ದಾರೆ.
ಮೀಸಲಾತಿ ಪರಿಶೀಲನೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 ರಂದು ವರದಿ ನೀಡಲು ಸೂಚಿಸಲಾಗಿದೆ. ಹಾಸನ, ಅರಸೀಕೆರೆಯ ಮೀಸಲಾತಿಯನ್ನು ಪ್ರಶ್ನಿಸಲಾಗಿತ್ತು. ಎಸ್.ಟಿ.ಗೆ ಮೀಸಲಾತಿ ನಿಗದಿಪಡಿಸಿರುವುದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಮಧ್ಯಂತರ ತಡೆ ನೀಡಲಾಗಿದೆ.