RNI NO. KARKAN/2006/27779|Thursday, December 12, 2024
You are here: Home » breaking news » ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು : ಈರಣ್ಣ ಬಳಿಗಾರ

ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು : ಈರಣ್ಣ ಬಳಿಗಾರ 

ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು : ಈರಣ್ಣ ಬಳಿಗಾರ

 

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ನ 1 :

 
ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು.
ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ರವಿವಾರ ನ.1 ರಂದು ಸ್ಥಳೀಯ ಡಾ. ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಸಾಹಿತ್ಯ, ಕಲೆ, ಭಾಷೆ, ಸಂಸ್ಕøತಿ, ಸಂಪ್ರದಾಯ, ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ ಎಂದರು.
ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅಧ್ಯಕ್ಷತೆ ವಹಿಸಿದ್ದರು. ಈರಯ್ಯ ಹಿರೇಮಠ ಸಾನಿಧ್ಯ ವಹಿಸಿ ಭುವನೇಶ್ವರಿ ದೇವಿಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಪುಂಡಲೀಕಪ್ಪ ಪಾರ್ವತೇರ, ಗೌಡಪ್ಪ ದೇಯಣ್ಣವರ, ವಿಜಯ ಹಿರೇಮಠ, ರಾಮಣ್ಣ ಬಳಿಗಾರ, ಭರಮಣ್ಣ ಪೂಜೇರ, ಶಂಭು ಹಿರೇಮಠ, ಮಂಜು ಪತ್ತಾರ, ಶಿವು ನಾಯ್ಕರ, ನಾಗೇಶ ಬೆಳಗಲಿ, ಸುರೇಶ ದಂಡಿನ, ದುಂಡಪ್ಪ ದಂಡಿನ, ಮನೋಹರ ಕತ್ತಿ ಸೇರಿದಂತೆ ಕನ್ನಡ ಪರ ಹೋರಾಟಗಾರರು, ಕರವೇ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

Related posts: