ಗೋಕಾಕ:ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ಜನತೆಗೆ ಹೆಚ್ಚಿನ ಸೇವೆ ಒದಗಿಸಲು ಸಾಧ್ಯ : ಸಂಸದ ಈರಣ್ಣ ಕಡಾಡಿ
ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ಜನತೆಗೆ ಹೆಚ್ಚಿನ ಸೇವೆ ಒದಗಿಸಲು ಸಾಧ್ಯ : ಸಂಸದ ಈರಣ್ಣ ಕಡಾಡಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 12 :
ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ಜನತೆಗೆ ಹೆಚ್ಚಿನ ಸೇವೆ ಒದಗಿಸಲು ಸಾಧ್ಯವೆಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಗುರುವಾರದಂದು ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಅನುದಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಡಾ: ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ರಾಜ್ಯಾದ್ಯಾಂತ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಮಾದರಿಯಾಗಿದೆ. ಕೃಷಿ,ಶಿಕ್ಷಣ, ವಿಪತ್ತುಗಳ ಸಂದರ್ಭದಲ್ಲಿ ಹಾಗೂ ಸ್ವಉದ್ಯೋಗ ಕಲ್ಪಿಸಿ ಆರ್ಥಿಕ ಪ್ರಗತಿಯಂತಹ ವಿಭಿನ್ನ ಸೌಲಭ್ಯಗಳನ್ನು ಕಲ್ಪಿಸಿ ಶ್ರಮಿಸುತ್ತಿರುವ ಪೂಜ್ಯರ ಕಾರ್ಯ ಶ್ಲಾಘನೀಯವಾಗಿದೆ. ಇವುಗಳ ಹಾಗೂ ಸರ್ಕಾರದ ಯೋಜನೆಗಳ ಸದುಪಯೋಗದಿಂದ ಜನತೆ ಆರ್ಥಿಕವಾಗಿ ಸದೃಢರಾಗಿ ನೆಮ್ಮದಿ ಬದುಕವನ್ನು ಕಟ್ಟಿಕೊಳ್ಳುವಂತೆ ಕರೆ ನೀಡಿದರು.
ವೇದಿಕೆ ಮೇಲೆ ಜನಜಾಗೃತಿ ವೇದಿಕೆ ಅಧ್ಯಕ್ಷ ಸೋಮಶೇಖರ ಮಗದುಮ್, ಸಂಸ್ಥೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಯೋಜನಾಧಿಕಾರಿ ಮಮತಾ ನಾಯಕ ಇದ್ದರು.