RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ:ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ 

ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 25 :

 

ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯವರು ಬುಧವಾರದಂದು ತಾ.ಪಂ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿ ನಂತರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕುರಿತು ಮಾಹಿತಿ ನೀಡುವದಿಲ್ಲ, ಯಾವುದೇ ಅರ್ಜಿಗಳಿಗೆ ಸ್ವೀಕೃತಿ ನೀಡುವದಿಲ್ಲ, ಕೂಲಿ ಕಾರ್ಮಿಕರು ಕೆಲಸ ಕೇಳಿದರೇ ಅರಣ್ಯ ಇಲಾಖೆಯವರನ್ನು ಕೇಳಿ ಎಂಬ ಹಾರಿಕೆಯ ಉತ್ತರವನ್ನು ನೀಡಿ ಸಾಗ ಹಾಕುತ್ತಾರೆ. ನಮಗೆ ನಿರಂತರ ಕೆಲಸ ನೀಡಬೇಕು. 3ತಿಂಗಳಿಗೊಮ್ಮೆ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸುವ ಸಭೆಯನ್ನು ಆಯೋಜಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ವಿ.ಎಸ್.ಹಿರೇಮಠ, ಎಮ್.ಆರ್.ಓಜಿ, ಜಿ.ಪಿ.ಬನ್ನಿಬಾಗಿ, ಆಯ್.ಸಿ.ಪಾಟೀಲ, ಶಿವನಗೌಡ ಪಾಟೀಲ, ಬಿ.ಆಯ್.ಚಿಕ್ಕನಗೌಡ ಸೇರಿದಂತೆ ಅನೇಕರು ಇದ್ದರು.

Related posts: