RNI NO. KARKAN/2006/27779|Tuesday, December 24, 2024
You are here: Home » breaking news » ಗೋಕಾಕ:ದಿ : 19 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಸೋಮಶೇಖರ್ ಮಗದುಮ್ಮ ಮಾಹಿತಿ

ಗೋಕಾಕ:ದಿ : 19 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಸೋಮಶೇಖರ್ ಮಗದುಮ್ಮ ಮಾಹಿತಿ 

ದಿ : 19 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಸೋಮಶೇಖರ್ ಮಗದುಮ್ಮ ಮಾಹಿತಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 16 :   ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ವತಿಯಿಂದ ದಿ : 19 ರಂದು ಮುಂಜಾನೆ 10 ಘಂಟೆಗೆ ನಗರದ ಕೆ.ಎಲ್.ಇ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಮಗದುಮ್ಮ ಹೇಳಿದರು ಬುಧವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ರಷ್ಟು ಅಂಕ ಪಡೆದಿರುವ 110 ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಪುರಸ್ಕರಿಸಲಾಗುವದು. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗದುಗಿನ ಶಿವಾನಂದ ಬೃಹನ್ಮಠದ ಜಗದ್ಗುರು ಶ್ರೀ ಸದಾಶಿವಾನಂದಭಾರತಿ ಮಹಾಸ್ವಾಮಿಗಳು ವಹಿಸುವರು. ಅಧ್ಯಕ್ಷೆತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷೆ ಶರಣೆ ರತ್ನಪ್ರಭಾ ಬೆಲ್ಲದ ವಹಿಸುವರು , ಮುಖ್ಯ ಅತಿಥಿಗಳಾಗಿ ಪ್ರಭಾಕರ ಕೋರೆ, ಅರುಣಾದೇವಿ ಎಸ್.ವಾಯ್, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಜಯಾನಂದ ಮುನವಳ್ಳಿ, ಚೇತನ ಅಂಗಡಿ, ಜ್ಯೋತಿ ಭಾವಿಕಟ್ಟಿ ಭಾಗವಹಿಸಲಿದ್ದು, ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸೋಮಶೇಖರ್ ಮಗದುಮ್ಮ ಮನವಿ ಮಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ಗೋಕಾಕ ತಾಲೂಕು ಘಟಕದ ಗೌರವಾಧ್ಯಕ್ಷ ರಾಜು ಮುನವಳ್ಳಿ ಮಾತನಾಡಿ ಗೋಕಾಕ ತಾಲೂಕಿನ ಬಹುದಿನಗಳ ಬೇಡಿಕೆಯಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಈ ವರ್ಷದಿಂದ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳು 19 ರಂದು ಈ ಕಾರ್ಯಕ್ರಮ ಜರುಗಲಿದೆ. ಬೆಳಗಾವಿ ನಂತರ ಗೋಕಾಕ ನಗರ ಶೈಕ್ಷಣಿಕವಾಗಿ ಬೆಳೆಯುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳು ಸಹ ಮುಂದೆ ಬರುಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ.ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ತಾಲ್ಲೂಕಿನ ಎಲ್ಲ ಪಿಯುಸಿ ವಿದ್ಯಾರ್ಥಿಗಳಿಗೆ ಸುಸಜ್ಜಿತ ಗ್ರಂಥಾಲಯವನ್ನು ಪ್ರಾರಂಭಿಸಲಾಗುವುದು. ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಈ ಗ್ರಂಥಾಲಯದಲ್ಲಿ ಹಿಡಲು ಈಗಾಗಲೇ 5 ಸಾವಿರ ವಿಷಯ ಪುಸ್ತಕಗಳನ್ನು ಸಂಗ್ರಹಿಸಿಲಾಗಿದ್ದು, ನುರಿತ ವಿಷಯ ಪ್ರಾಧ್ಯಾಪಕರು ಸಹ ಈ ಗ್ರಂಥಾಲಯದಲ್ಲಿ ನೋಡಿಕೊಳ್ಳಲಿದ್ದು , ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿಲಿದ್ದಾರೆ ಎಂದು ಮಾಹಿತಿ ನೀಡಿದ ಅವರು ಎಲ್ಲಾ ಸಮುದಾಯ ವಿದ್ಯಾರ್ಥಿಗಳಿಗೆ ಈ ಗ್ರಂಥಾಲಯ ಮುಕ್ತವಾಗಿದ್ದು, ಇದರ ಸದುಪಯೋಗ ಪಡೆಸಿಕೊಳ್ಳುವಂತೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರುಗಳಾದ ಎಸ್.ಎಂ ಗಣಾಚಾರಿ, ವ್ಹಿ.ಎಸ್.ಮಗದುಮ್ಮ, ವಿಶ್ವನಾಥ್ ಕಡಕೋಳ, ಪ್ರಕಾಶ ಬಾಗೋಜಿ, ಸಿ.ಬಿ.ಗಿಡನ್ನವರ, ಬಸವರಾಜ ಹುಳ್ಳೇರ, ವಿಶ್ವನಾಥ್ ಬೆಲ್ಲದ,ಮಹಾಂತೇಶ ವಾಲಿ, ಮಹಾಂತೇಶ ತಾಂವಶಿ, ಪ್ರಸಾದ ಸೋಲಾಪೂರಮಠ, ಪಿ.ಎಂ ವಣ್ಣೂರ , ಮಹಾಂತೇಶ ಮಠಪತಿ ಉಪಸ್ಥಿತರಿದ್ದರು.

Related posts: