ಗೋಕಾಕ:ನಾಳೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ನಗರಕ್ಕೆ : ಬಸವರಾಜ ಕಾಡಾಪೂರ
ನಾಳೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ನಗರಕ್ಕೆ : ಬಸವರಾಜ ಕಾಡಾಪೂರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 19 :
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ಅವರು ಬುಧವಾರ ದಿನಾಂಕ 20 ರಂದು ಮಧ್ಯಾಹ್ನ 12 ಘಂಟೆಗೆ ಗೋಕಾಕ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಕಾಡಾಪೂರ ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬುಧವಾರದಂದು ಮಧ್ಯಾಹ್ನ 12 ಘಂಟೆಗೆ ನಗರದ ಹೊರವಲಯದ ಪ್ರವಾಸಿ ಮಂದಿರದಲ್ಲಿ ಅಧ್ಯಕ್ಷ ಎಚ್ ಹನುಮಂತಪ್ಪ ಬಳ್ಳಾರಿ ಅವರು ದಲಿತ ಸಂಘಟನೆಗಳ ಎಲ್ಲ ಪದಾಧಿಕಾರಿಗಳೊಂದಿಗೆ ಸಭೆಯ ನಡೆಸಲಿದ್ದಾರೆ . ಸಭೆಯ ನಂತರ ಎಲ್ಲ ಪದಾಧಿಕಾರಿಗಳ ಪರವಾಗಿ ಸತ್ಕರಿಸಿ ಗೌರವಿಸಲಾಗುವುದು ಎಂದು ಬಸವರಾಜ ಕಾಡಾಪೂರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.