ಗೋಕಾಕ:ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ
‘ಹರ್ ಘರ್ ಜಲ್’ ಕಾಮಗಾರಿಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ
1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 25 :
ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.
ಈಗಾಗಲೇ ಜಲಜೀವನ ಮಿಷನ್ ಯೋಜನೆಯಡಿ ಪಟಗುಂದಿ, ಧರ್ಮಟ್ಟಿ, ಗುಜನಟ್ಟಿ, ತುಕ್ಕಾನಟ್ಟಿ, ರಾಜಾಪೂರ, ದಂಡಾಪೂರ, ದುರದುಂಡಿ, ಬಡಿಗವಾಡ, ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳು ಚಾಲನೆಯಲ್ಲಿವೆ. ಕೌಜಲಗಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿಯೂ ಸಹ ಈ ಕಾಮಗಾರಿಗೆ ಕೋಟಿ ರೂ. ಅನುದಾನ ಮಂಜೂರಾಗಿದ್ದು, 3500 ಮೀಟರ್ ಪೈಪಲೈನ್ ಕಾಮಗಾರಿ ನಡೆಯಲಿದೆ ಎಂದು ಹೇಳಿದರು.
ಗುದ್ದಲಿ ಪೂಜೆ : ಎಸ್‍ಸಿಪಿ ಟಿಎಸ್‍ಪಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಎಸ್‍ಸಿಪಿ ಟಿಎಸ್‍ಪಿ ಯೋಜನೆಯಡಿ ಅರಭಾವಿ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ನಡೆದಿವೆ. ಇದರಲ್ಲಿ ಒಳಚರಂಡಿ ನಿರ್ಮಾಣ, ಸಿಸಿ ರಸ್ತೆ, ಸಮುದಾಯ ಭವನಗಳು ಸೇರಿದಂತೆ ಹಲವು ಕಾಮಗಾರಿಗಳು ನಡೆದಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಪಂ ಸದಸ್ಯರಾದ ಶಾಂತಪ್ಪ ಹಿರೇಮೇತ್ರಿ, ಲಕ್ಷ್ಮಣ ಮಸಗುಪ್ಪಿ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಪ್ರಭಾಶುಗರ ನಿರ್ದೇಶಕ ಮಹಾದೇವಪ್ಪ ಭೋವಿ, ಯುವ ಮುಖಂಡ ರವಿ ಪರುಶೆಟ್ಟಿ, ಜಿಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವಾನಂದ ಲೋಕನ್ನವರ, ಗ್ರಾಪಂ ಮಾಜಿ ಅಧ್ಯಕ್ಷರಾದ ಮಕ್ತುಮಸಾಬ ಖಾಜಿ, ಹೊಳೆಪ್ಪ ಲೋಕನ್ನವರ, ಅಶೋಕ ಉದ್ದಪ್ಪನವರ, ರಾಯಪ್ಪ ಬಳೋಲದಾರ, ಪಿಕೆಪಿಎಸ್ ಅಧ್ಯಕ್ಷ ಜಿ.ಎಸ್. ಲೋಕನ್ನವರ, ವೆಂಕಟೇಶ ದಳವಾಯಿ, ಫಕೀರಪ್ಪ ಪೂಜನ್ನವರ, ಹಾಸೀಂಸಾಬ ನಗಾರ್ಚಿ, ಶಂಕರ ಜೋತೆನ್ನವರ, ಮಹಾದೇವ ಬುದ್ನಿ, ರಾಮಪ್ಪ ಈಟಿ, ಗ್ರಾಕುನೀಸ ಮತ್ತು ನೈ ಇಲಾಖೆಯ ಎಇಇ ಇಮಾಮಸಾಬ ದಫೆದಾರ, ಪಿಡಿಓ, ಗ್ರಾಪಂ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.