RNI NO. KARKAN/2006/27779|Saturday, December 14, 2024
You are here: Home » breaking news » ಗೋಕಾಕ:ಈ ಬಾರಿಯ ಶರಣ ಸಂಸ್ಕೃತಿ ಉತ್ಸವ ಯಶಸ್ವಿಯಾಗಿ ನಡೆಯಲಿ : ಸಚಿವ ರಮೇಶ ಶುಭ ಹಾರೈಕೆ

ಗೋಕಾಕ:ಈ ಬಾರಿಯ ಶರಣ ಸಂಸ್ಕೃತಿ ಉತ್ಸವ ಯಶಸ್ವಿಯಾಗಿ ನಡೆಯಲಿ : ಸಚಿವ ರಮೇಶ ಶುಭ ಹಾರೈಕೆ 

ಈ ಬಾರಿಯ ಶರಣ ಸಂಸ್ಕೃತಿ ಉತ್ಸವ ಯಶಸ್ವಿಯಾಗಿ ನಡೆಯಲಿ : ಸಚಿವ ರಮೇಶ ಶುಭ ಹಾರೈಕೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 28 :

 
ಪ್ರತಿವರ್ಷ ಶೂನ್ಯ ಸಂಪಾದನ ಮಠದ ಆಶ್ರಯದಲ್ಲಿ ಜರಗುವ ಶರಣ ಸಂಸ್ಕೃತಿ ಉತ್ಸವ ಈ ಬಾರಿ ಯಶಸ್ವಿಯಾಗಿ ನಡೆಯಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಶುಭ ಹಾರೈಸಿದರು

ರವಿವಾರದಂದು ನಗರದ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು ನಂತರ ಪರ್ತಕರ್ತರೊಂದಿಗೆ ಅವರು ಮಾತನಾಡಿದರು.

ಪ್ರತಿವರ್ಷ ನಡೆಯುವ ಈ ಉತ್ಸವದಲ್ಲಿ ಪಾಲ್ಗೋಳುತ್ತಾ ಬಂದಿದ್ದು ಈ ಬಾರಿ ಕೆಲಸದ ಒತ್ತಡದಿಂದ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಲು ಆಗುತ್ತಿಲ್ಲ, ತಾಲೂಕಿನ ಎಲ್ಲ ಸಾರ್ವಜನಿಕರು ಶರಣ ಸಂಸ್ಕೃತಿ ಉತ್ಸವದಲ್ಲಿ ಸಕ್ರಿಯವಾಗಿ ಭಾಗವಹಿಸಿ , ಉತ್ಸವದಲ್ಲಿ ಪಾಲ್ಗೋಳುವ ಚಿಂತಕರು ನೀಡುವ ಉಪನ್ಯಾಸಗಳನ್ನು ಆಲಿಸಿ ಸಮಾಜದಲ್ಲಿಯ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿ ಸದೃಢ ಸಮಾಜವನ್ನು ಕಟ್ಟಲು ಮುಂದಾಗಬೇಕು ಎಂದ ಸಚಿವರು ಮೂರು ದಿನಗಳ ಕಾಲ ಜರಗುವ ಶರಣ ಸಂಸ್ಕೃತಿ ಉತ್ಸವದ ಎಲ್ಲಾ ಗೋಷ್ಠಿಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಪರಮ ಪೂಜ್ಯ ಮುರುಘರಾಜೇಂದ್ರ ಮಹಾಸ್ವಾಮಿಗಳು,ಬಟಕುರ್ಕಿಯ ಬಸವಲಿಂಗ ಸ್ವಾಮಿಜಿ ಇದ್ದರು.

Related posts: