ಗೋಕಾಕ:ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು : ಸುರೇಶ ಸನದಿ ಮನವಿ
ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು : ಸುರೇಶ ಸನದಿ ಮನವಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 5 :
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿ ಜಿಲ್ಲಾ ಹಾಗೂ ರಾಜ್ಯಾಧ್ಯಂತ ಪ್ರತಿಭಟನೆ ಮಾಡುತ್ತಿದ್ದು ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ರಮೇಶ್ ಜಾರಕಿಹೊಳಿ ಅಭಿಮಾನಿ ಸುರೇಶ ಸನದಿ ಹೇಳಿದರು.
ಅವರು, ನಗರದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಮೇಶ್ ಜಾರಕಿಹೋಳಿ ಬೆಂಬಲಿಗರಿಂದ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳಿಂದ ರಮೇಶ್ ಜಾರಕಿಹೋಳಿ ಬೇಸರ ವ್ಯಕ್ತಪಡಿಸಿದ್ದಾರೆ. ದೂರವಾಣಿ ಮೂಲಕ ತಮ್ಮ ಬೆಂಬಲಿಗರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿರುವದು ಮಾಜಿ ಸಚಿವರಿಗೆ ದುಃಖ ತಂದಿದೆ ಎಂದರು.
ರಮೇಶ್ ಜಾರಕಿಹೊಳಿ ಬೆಂಬಲಿಗರು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ಸರ್ಕಾರಿ ಆಸ್ತಿಪಾಸ್ತಿಗೆ ಹಾನಿಮಾಡಬೇಡಿ. ಪ್ರತಿಭಟನೆಯಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಸಚಿವರು ಮನವಿ ಮಾಡಿರುವದಾಗಿ ಸನದಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಸಚಿವರ ಆಪ್ತ ಲಕ್ಷ್ಮೀಕಾಂತ ಎತ್ತಿನಮನಿ, ಸುಧೀರ ಜೋಡಟ್ಟಿ ಇದ್ದರು.