RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಮನವಿ

ಗೋಕಾಕ:ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಮನವಿ 

ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 5 :  

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‍ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‍ಸಿ ಪಕ್ಷದ ಕಾರ್ಯಕರ್ತರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು. ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.2 ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ನೂರಾರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ತೆರಳಿ ಹಲ್ಲೆ ಮಾಡಿದ್ದು, ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಲದ ಕೆಲವೆಡೆ ಬಿಜೆಪಿ ಮಹಿಳಾ ಕಾರ್ಯಕರ್ತರ ಮೇಲೆ ಮಾನಭಂಗ ಮಾಡುವ ಯತ್ನಗಳು ನಡೆದಿವೆ. ಕಳೆದ ಐದು ವರ್ಷಗಳಲ್ಲಿ 140ಕ್ಕೂ ಹೆಚ್ಚು ಜನ ಬಿಜೆಪಿ ಕಾರ್ಯಕರ್ತರು ತೃಣಮೂಲ ಟಿಎಮ್‍ಸಿ ಹಾಗೂ ಕಾಂಗ್ರೇಸ್ ದೌರ್ಜನ್ಯಕ್ಕೆ ಬಲಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರಷ್ಟೆ ಅಲ್ಲದೇ ಮತದಾರರ ಮೇಲೆಯೂ ದಾಳಿ ನಡೆಸಲಾಗುತ್ತಿದೆ. ಟಿಎಮ್‍ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಕಾಂಗ್ರೇಸ್ ಪಕ್ಷಗಳು ಸೇರಿಕೊಂಡು ಬಿಜೆಪಿ ಪಕ್ಷದ ಕಾರ್ಯಕರ್ತರ ಪದೆ ಪದೆ ದೌರ್ಜನ್ಯವೆಸಗುತ್ತಿರುವದು ಖಂಡನೀಯ. ಹಿಂಸಾಚಾರ ಎಸಗುವವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಕೆಂಪಣ್ಣ ಮೈಲನ್ನವರ, ಬಸವರಾಜ ಹಿರೇಮಠ, ಗಂಗಪ್ಪ ಅಂಗಡಿ, ಬಾಳೇಶ ಗಿಡ್ಡನವರ, ವೀರೆಂದ್ರ ಎಕ್ಕೇರಿಮಠ, ಸುಧೀರ ಜೋಗೊಜಿ, ಭೀಮಶಿ ಚಿಕ್ಕನ್ನವರ, ಬಸು ಚಿಕ್ಕನ್ನವರ, ಮಂಜುನಾಥ ಮಾಳಿ, ಬಸವಂತಪ್ಪ ಹೊಸೂರ, ಕಿರಣ ವಾಲಿ, ವಿಶ್ವನಾಥ ಜೋಶಿ ಇದ್ದರು.

Related posts: